ಬೆಂಗಳೂರಿನಲ್ಲಿ ಮತ್ತೋರ್ವ ಎಎಸ್ಐ ಕೋವಿಡ್-19 ಗೆ ಬಲಿ

Source: uni | Published on 6th July 2020, 11:51 PM | State News | Don't Miss |

ಬೆಂಗಳೂರು: ಸಿಲಿಕಾನ್ ಸಿಟಿಯ‌ ಮತ್ತೋರ್ವ ಕೊರೊನಾ ವಾರಿಯರ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.
ನಗರದ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 57 ವರ್ಷದ ಎಎಸ್ ಐ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. 
ಕಳೆದ ಮೂರು ದಿನಗಳ ಹಿಂದೆ ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಉಸಿರಾಟ ಸಮಸ್ಯೆ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಪೊಲೀಸರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೊಲೀಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸೇರಿ ಮೃತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಮತ್ತಷ್ಟು ಆತಂಕ ಸೃಷ್ಟಿಸಿದೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...