ಭಟ್ಕಳದಲ್ಲಿ ದೃಢಪಟ್ಟ ಮತ್ತೊಂದು ಕೊರೋನಾ ವೈರಸ್ ಪ್ರಕರಣ; ೭ಕ್ಕೇರಿದ ಪೀಡಿತರ ಸಂಖ್ಯೆ

Source: sonews | By Staff Correspondent | Published on 28th March 2020, 9:51 PM | Coastal News | Don't Miss |

ಭಟ್ಕಳ: ಶನಿವಾರ ಭಟ್ಕಳದಲ್ಲಿ ಮೂವರಿಗೆ ಕೊರೋನಾ ವೈರಸ್ ದೃಢಪಟ್ಟ ಬೆನ್ನಹಿಂದೆಯೆ ಸಂಜೆಯಾಗುತ್ತಲೆ ಮತ್ತೊಂದು ಕೊರೋನಾ ಸೋಂಕು ಪೀಡಿತ ದೃಢಪಟ್ಟಿದ್ದು ಒಟ್ಟಾರೆಯಾಗಿ ದಿನದಿಂದ ದಿನಕ್ಕೆ ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೆ ಸಾಗಿದ್ದು ಭಟ್ಕಳದ ಜನರನ್ನು ಆತಂಕ್ಕೀಡು ಮಾಡಿದೆ.

ಈತ (ಸೋಂಕಿತ ಸಂಖ್ಯೆ- 76) ಮಂಗಳೂರಿನಿಂದ ಮಾ.20ರಂದು ಭಟ್ಕಳಕ್ಕೆ ಆಗಮಿಸಿದ್ದ ಸೋಂಕಿತ ಸಂ.35ರ ಸ್ನೇಹಿತನಾಗಿದ್ದಾನೆ. ಜಿಲ್ಲೆಯ ಮೊದಲ ಸೋಂಕಿತನಾದ ಸಂ.35ನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು, ಭಟ್ಕಳಕ್ಕೆ ಈತ ತನ್ನ ಕಾರಿನಲ್ಲಿ ಕರೆದುಕೊಂಡು ಬಂದಿದ್ದ. ಬಳಿಕ ಆತನ ಮನೆಗೂ ತೆರಳಿ ಸೋಂಕಿತ ಸಂ.35ನ್ನು ಬಿಟ್ಟು ಬಂದಿದ್ದ.

ಇದಾದ ನಂತರ ಅರ್ಧ ಗಂಟೆಯಲ್ಲೇ ಸೋಂಕಿತ ಸಂ.35 ಅನುಮಾನದ ಮೇಲೆ ಆಸ್ಪತ್ರೆಗೆ ಸೇರಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅನುಮಾನದ ಮೇಲೆ‌ ಈ ಸ್ನೇಹಿತನ ಸೋಂಕಿತ ಸಂಖ್ಯೆ- 76) ಗಂಟಲು ದ್ರವವನ್ನೂ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಈ ಸ್ನೇಹಿತನಿಗೂ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...