ದೇಶದಲ್ಲಿ ಸಿದ್ಧವಾಗುತ್ತಿದೆ ಮತ್ತೊಂದು ಕೊರೊನಾ ಲಸಿಕೆ, ಇಲಿಗಳ ಮೇಲಿನ ಪ್ರಯೋಗ ಯಶಸ್ವಿ

Source: PTI | Published on 12th September 2020, 6:54 PM | National News | Don't Miss |

ನವದೆಹಲಿ: ಕೊರೊನಾ ನಿಗ್ರಹಕ್ಕಾಗಿ ದೇಶಿಯವಾಗಿ ಅಭಿವೃದ್ಧಿಪಡಿಸುತ್ತಿರುವ ಲಸಿಕೆಗಳ ಪಟ್ಟಿಗೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, ಇಲಿಗಳ ಮೇಲಿನ ಈ ಲಸಿಕೆಯ ಪ್ರಯೋಗ ಸಂಪೂರ್ಣ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಈ ಲಸಿಕೆಯನ್ನು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಇಮ್ಯುನೊಲಾಜಿ (ಎನ್‍ಐಐ) ಅಭಿವೃದ್ಧಿಪಡಿಸುತ್ತಿರುವ ಈ ಲಸಿಕೆ ಆರಂಭಿಕ ಪ್ರಯೋಗಗಳು ಯಶಸ್ವಿಯಾಗಿದ್ದು, ಇಲಿಗಳ ಮೇಲಿನ ಪ್ರಯೋಗ ಸಂಪೂರ್ಣಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಎನ್‍ಐಐ ನಿರ್ದೇಶಕ ಅಮೂಲ್ಯ ಪಾಂಡಾ ಮಾಹಿತಿ  ನೀಡಿದ್ದು, ಆರಂಭಿಕವಾಗಿ ಜುಲೈನಲ್ಲಿ ಇಲಿಗಳ ಮೇಲೆ ಈ ಲಸಿಕೆ ಪ್ರಯೋಗ ನಡೆಸಲಾಗಿತ್ತು. ಪ್ರಯೋಗದ ಬಳಿಕ ಉತ್ತಮ ಫಲಿತಾಂಶ ಬಂದಿದ್ದು, ಲಸಿಕೆ ಪಡೆದ ಇಲಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಜೈವಿಕ ತಂತ್ರಜ್ಞಾನ ವಿಭಾಗದ ಅಡಿಯಲ್ಲಿರುವ ಎನ್‍ಐಐ, ಕೊರೊನಾ ವೈರಸ್ ವಿರುದ್ಧ ಪ್ರೊಟೀನ್ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿದೆ. ಇದು ಇಲಿಗಳಲ್ಲಿ ವೈರಸ್ ಗಳನ್ನು ತಟಸ್ಥಗೊಳಿಸಿದೆ ಮತ್ತು ಪ್ರತಿಕಾಯಗಳನ್ನು ಉತ್ಪಾದಿಸುವಲ್ಲಿ ಸಮರ್ಥವಾಗಿದೆ ಎಂದು ತಜ್ಞರು ಭರವಸೆ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ  ಕೆಲವು ಇಲಿಗಳ ಮೇಲೆ ಮಾತ್ರ ಈ ಪ್ರಯೋಗ ನಡೆದಿತ್ತು. ಆರಂಭಿಕ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಲಿಗಳ ಸಮೂಹದ ಮೇಲೆ ಪ್ರಯೋಗ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಯೋಗ ಯಶಸ್ಸು ಕಂಡಲ್ಲಿ ಮಾನವರ ಮೇಲೆ ಪ್ರಯೋಗ ಮಾಡುವ ಕುರಿತು ಸಂಸ್ಥೆ  ನಿರ್ಧರಿಸಿದೆ.
ಇನ್ನು ಕೊರೋನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಇದು ಭಾರತದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಮೂರನೇ ಲಸಿಕೆಯಾಗಿದೆ. ಇದಕ್ಕೂ ಮೊದಲು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಮತ್ತು ಝೈಡಸ್ ಕ್ಯಾಡಿಲಾ ಸಂಸ್ಥೆಗಳು ಲಸಿಕೆ ಉತ್ಪಾದನೆಯಲ್ಲಿ ತೊಡಗಿವೆ. ಸದ್ಯ ಈ ಎರಡೂ ಲಸಿಕೆಗಳನ್ನು ಮಾನವರ  ಮೇಲೆ ಎರಡನೇ ಹಂತದ ಪ್ರಯೋಗ ನಡೆಸಲಾಗುತ್ತಿದೆ.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...