ಕೋಟಾದಲ್ಲಿ ಇನ್ನೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷ ಸಾವಿಗೆ ಶರಣಾದ 28ನೇ ಕೋಚಿಂಗ್ ವಿದ್ಯಾರ್ಥಿ

Source: Vb | By I.G. Bhatkali | Published on 29th November 2023, 10:16 AM | National News |

ಕೋಟಾ(ರಾಜಸ್ಥಾನ): ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಗೆ ತಯಾರಿ ನಡೆಸುತ್ತಿದ್ದ 20 ವರ್ಷ ಪ್ರಾಯದ ವಿದ್ಯಾರ್ಥಿಯೊಬ್ಬರು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿ "ಯನ್ನು ಪಶ್ಚಿಮ ಬಂಗಾಳದ ಬೀರ್‌ಭೂಮಿ ಜಿಲ್ಲೆಯ ಫೌರೀದ್ ಹುಸೈನ್ ಎಂಬುದಾಗಿ ಗುರುತಿಸಲಾಗಿದೆ ಅವರು ಒಂದು ವರ್ಷದಿಂದ ಕೋಟಾದ ಕೋಚಿಂಗ್ ಕೇಂದ್ರವೊಂದರಲ್ಲಿ ನೀಟ್ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಆತ್ಮಹತ್ಯಾ ಪತ್ರ ಪೊಲೀಸರಿಗೆ ಸಿಕ್ಕಿಲ್ಲ. ಹುಸೈನ್ ಕೋಟಾದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ 28ನೇ ವಿದ್ಯಾರ್ಥಿ ಆಗಿದ್ದಾರೆ.

ಕೋಟಾವು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳು ಹಾಗೂ ನಾಗರಿಕ ಸೇವೆಗಳ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ನೆರವು ನೀಡುವ ಕೋಚಿಂಗ್ ಸಂಸ್ಥೆಗಳ ಕೇಂದ್ರವಾಗಿದೆ. ಅಲ್ಲಿಗೆ ಪ್ರತಿವರ್ಷ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹೋಗುತ್ತಾರೆ.

ಕೋಟಾದಲ್ಲಿ ಈ ವರ್ಷ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಗಳು 2015ರ ಬಳಿಕ ಅತಿ ಹೆಚ್ಚು ಎಂಬುದಾಗಿ ಆಗಸ್ಟ್‌ನಲ್ಲಿ 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿತ್ತು. ಕೋಟಾದಲ್ಲಿ 2015ರಲ್ಲಿ 17 ವಿದ್ಯಾರ್ಥಿಗಳು, 2016ರಲ್ಲಿ 16 ವಿದ್ಯಾರ್ಥಿಗಳು, 2018ರಲ್ಲಿ 20 ವಿದ್ಯಾರ್ಥಿಗಳು ಮತ್ತು 2019ರಲ್ಲಿ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದಾಖಲೆಗಳು ಹೇಳುತ್ತವೆ.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, 2020 ಮತ್ತು 2021ರಲ್ಲಿ ಕೋಟಾದ ಕೋಚಿಂಗ್ ಸಂಸ್ಥೆಗಳು ಮುಚ್ಚಿದ್ದವು. ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸಲು ರಾಜಸ್ಥಾನ ಸರಕಾರವು ರಾಜಸ್ಥಾನ ಕೋಚಿಂಗ್ ಇನ್‌ಸ್ಟಿಟ್ಯೂಟ್ಸ್ (ನಿಯಂತ್ರಣ) ಮಸೂದೆ, 2023 ಮತ್ತು ರಾಜಸ್ಥಾನ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ನಿಯಂತ್ರಣ ಪ್ರಾಧಿಕಾರ ಮಸೂದೆ, 2023 ಮಸೂದೆಗಳನ್ನು ಪರಿಚಯಿಸಿದೆ. ಆದರೆ, ಈ ಮಸೂದೆಗಳು ಇನ್ನಷ್ಟೇ ಅಂಗೀಕಾರಗೊಳ್ಳಬೇಕಾಗಿವೆ. ಪ್ರಸ್ತಾಪಿತ ಮಸೂದೆಗಳು ಖಾಸಗಿ ಕೋಚಿಂಗ್ ಸಂಸ್ಥೆಗಳು ವಿಧಿಸುವ ಶುಲ್ಕಗಳು ಮತ್ತು ಅಧ್ಯಯನ ಸಾಮಗ್ರಿಗಳಿಗೆ ವಿದ್ಯಾರ್ಥಿಗಳು ಪಾವತಿಸಬೇಕಾಗಿರುವ ಶುಲ್ಕಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಬೇಕೆಂದು ಶಿಫಾರಸು ಮಾಡುತ್ತವೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...