ದೆಹಲಿ ಹಿಂಸಾಚಾರ; ಪೊಲೀಸ್ ಕಸ್ಟಡಿಯಲ್ಲಿ ದೈಹಿಕ ಚಿತ್ರಹಿಂಸೆ ಆರೋಪ

Source: sonews | By Staff Correspondent | Published on 27th February 2020, 10:53 PM | National News |

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದಿಲ್ಲಿಯ ಖುರೇಜಿ ಖಾಸ್ ಪ್ರದೇಶದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಬಂಧಿತರಾದ ಇಬ್ಬರು ಕಾರ್ಯಕರ್ತರಿಗೆ ಪೊಲೀಸ್ ಕಸ್ಟಡಿಯಲ್ಲಿ ದೈಹಿಕ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಖುರೇಜಿ ಖಾಸ್ ಪ್ರದೇಶದಲ್ಲಿ ಜನವರಿ 13ರಿಂದ ನಡೆಯುತ್ತಿರುವ ಪ್ರತಿಭಟನೆಯ ಮುಂಚೂಣಿಯಲ್ಲಿರುವ ಇಶ್ರತ್ ಜಹಾನ್ ಮತ್ತು ಖಾಲಿದ್ ಸೈಫ್‌ರನ್ನು ಬುಧವಾರ(ಫೆ.26ರಂದು) ಬಂಧಿಸಿ ನ್ಯಾಯಾಂಗ ಬಂಧನಲ್ಲಿಡಲಾಗಿದೆ. ನ್ಯಾಯವಾದಿಯಾಗಿರುವ ಇಶ್ರತ್ ಜಹಾನ್ ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು. ಉದ್ಯಮಿಯಾಗಿರುವ ಸೈಫ್ ‘ಯುನೈಟೆಡ್ ಅಗೈನ್ಸ್ಟ್ ಹೇಟ್’ ಎಂಬ ಸಮಾಜಸೇವಾ ಸಂಸ್ಥೆಯ ಕಾರ್ಯಕರ್ತರಾಗಿದ್ದಾರೆ. ಇಬ್ಬರ ವಿರುದ್ಧವೂ ದೊಂಬಿ, ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ, ಪಿಸ್ತೂಲ್ ಬಳಸಿರುವ ಪ್ರಕರಣ ದಾಖಲಿಸಲಾಗಿದೆ. ಇವರೊಂದಿಗೆ ಸಾಬು ಅನ್ಸಾರಿ ಎಂಬ ಕಾರ್ಯಕರ್ತನನ್ನೂ ಬಂಧಿಸಲಾಗಿದ್ದು ಇವರನ್ನು ಮಂಡೋಲಿ ಜೈಲಿನಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 ಕೋರ್ಟ್‌ಗೆ ಹಾಜರುಪಡಿಸಿದಾಗ ಸೈಫ್ ಗಾಲಿಕುರ್ಚಿಯಲ್ಲಿ ಆಗಮಿಸಿದ್ದು ಅವರು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮತ್ತು ಕೈಗೆ ಬ್ಯಾಂಡೇಜ್ ಹಾಕಲಾಗಿತ್ತು. ಇಶ್ರತ್ ಜಹಾನ್‌ರ ಕೈಗೂ ಬ್ಯಾಂಡೇಜ್ ಹಾಕಲಾಗಿದೆ. ತಮ್ಮ ಮೇಲೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿರುವುದಾಗಿ ಇಬ್ಬರೂ ತಿಳಿಸಿದ್ದಾರೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ. ಪೊಲೀಸರು ಎಫ್‌ಐಆರ್‌ನಲ್ಲಿ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸುದ್ಧಿಸಂಸ್ಥೆಯೊಂದು ವರದಿ ಮಾಡಿದೆ.

 ಫೆ.26ರಂದು ಖುರೇಜಿ ಖಾಸ್ ಪ್ರದೇಶದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಅಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ತಕ್ಷಣ ಅಲ್ಲಿಗೆ ಧಾವಿಸಿದ ಪೊಲೀಸರು ಅಲ್ಲಿಂದ ತೆರಳುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡರು. ಆದರೆ ಅಲ್ಲಿಂದ ತೆರಳಬೇಡಿ ಎಂದು ಪ್ರತಿಭಟನಾಕಾರರಿಗೆ ತಿಳಿಸಿದ ಇಶ್ರತ್ ಜಹಾನ್, ಯಾವುದೇ ಬೆಲೆ ತೆತ್ತಾದರೂ ಆಝಾದಿಯನ್ನು ಉಳಿಸಿಕೊಳ್ಳುತ್ತೇವೆ. ಪೊಲೀಸರು ಏನು ಬೇಕಾದರೂ ಮಾಡಲಿ ಎಂದು ಘೋಷಣೆ ಕೂಗಿದರು. ಖಾಲಿದ್ ಸೈಫ್ ಪೊಲೀಸರತ್ತ ಕಲ್ಲೆಸೆಯುವಂತೆ ಪ್ರಚೋದನೆ ನೀಡಿದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವುದಾಗಿ ಸುದ್ಧಿ ಸಂಸ್ಥೆ ವರದಿ ಮಾಡಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...