ವಿವಿಗಳಲ್ಲಿ ಜಾತ್ಯತೀತ ವಿರೋಧಿ ಸಭೆ-ಸಮಾರಂಭ ನಡೆಸಬಾರದು; ಸಿಎಂ

Source: Vb | By I.G. Bhatkali | Published on 22nd August 2023, 11:20 AM | State News |

ಬೆಂಗಳೂರು:ವಿಶ್ವವಿದ್ಯಾ ನಿಲಯಗಳಲ್ಲಿ ಜಾತ್ಯತೀತ ವಿರೋಧಿ ಮನೋಭಾವ, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ಯಾವುದೇ ಕಾರಣಕ್ಕೂ ಆಯೋಜನೆ ಮಾಡಬಾರದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಉನ್ನತ ಶಿಕ್ಷಣ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 'ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ನೋಡಿದ್ದೇನೆ. ಹಾಗಾಗಿ, ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು ಎಂದರು.

ವಿವಿಗಳಿಂದ ಬಂದವರು ಮತ್ತೆ ಮಧ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಡ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು. ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು' ಎಂದು ಅವರು ಸೂಚಿಸಿದರು.

“ಸಾಕಷ್ಟು ಮೂಲಸೌಲಭ್ಯಗಳ ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ. ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯ ಮಂತ್ರಿಯಾಗಿದ್ದಾಗ ಶೇ.3 ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು. ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು' ಎಂದು ಅವರು ತಿಳಿಸಿದರು.

ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದ ಅವರು, ಬೇರೆ ಬೇರೆ ಭಾಷೆ, ಸಂಸ್ಕೃತಿ, ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಭಾವಿಸಿದ್ದೇನೆ ಎಂದು ಅವರು ನುಡಿದರು.

ಎಸ್ಸಿ-ಎಸ್‌ಟಿ ವಿದ್ಯಾರ್ಥಿಗಳ ಲ್ಯಾಪ್‌ಟಾಪ್‌ಗೆ 230 ಕೋಟಿ ರೂ.
ಬೆಂಗಳೂರು: ವಿಶ್ವವಿದ್ಯಾನಿಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅನ್ನು ಎಸ್‌ಪಿಎಸ್ಸಿಪಿ, ಟಿಎಸ್‌ ಪಿ ಅಡಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಅವರು, ಲ್ಯಾಪ್‌ಟಾಪ್ ವಿತರಿಸುವ ಸಂಬಂಧ ಎಸ್‌ಸಿಎಸ್‌ಪಿ, ಟಿಎಸ್‌ ಪಿ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ದೂರವಾಣಿ ಮೂಲಕ ಸೂಚಿಸಿ ಗಮನ ಸೆಳೆದರು.

ವಿವಿಗಳಲ್ಲಿರುವ ಎಲ್ಲ ಸಮುದಾಯಗಳ ಪ್ರತೀ ವಿದ್ಯಾರ್ಥಿಗಳಿಗೂ ಲ್ಯಾಪ್‌ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಇಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಅವರು ಸೂಚಿಸಿದರು.

ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ.50 ಕ್ಕೂ ಹೆಚ್ಚು ಖಾಲಿ ಇದ್ದು, 1,882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾನಿಲಯಗಳ ಸಂಪನ್ಮೂಲದಿಂದಲೇ 2,865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ. ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿವೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5,470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2,474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...