ಆಂಧ್ರಪ್ರದೇಶ, ತೆಲಂಗಾಣ ಪಿಎಫ್‌ಐ ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ, ತೀವ್ರ ಶೋಧ

Source: PTI | By MV Bhatkal | Published on 19th September 2022, 12:25 AM | National News |

ಅಮರಾವತಿ: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇರೆಗೆ ಆಂಧ್ರಪ್ರದೇಶ, ತೆಲಂಗಾಣದ ಸುಮಾರು 4 ಜಿಲ್ಲೆಗಳ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸಿದೆ.

ಮುಸ್ಲಿಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ‘ದೇಶ ವಿರೋಧಿ ಚಟುವಟಿಕೆಗಳಲ್ಲಿ’ ತೊಡಗಿದೆ ಎಂಬ ಆರೋಪದ ಮೇಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಭಯೋತ್ಪಾದನಾ ನಿಗ್ರಹ ದಳ ಇಂದು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಆಂಧ್ರಪ್ರದೇಶದ ಕರ್ನೂಲ್, ನೆಲ್ಲೂರು ಮತ್ತು ನಂದ್ಯಾಲ್ ಮತ್ತು ತೆಲಂಗಾಣದ ನಿಜಾಮಾಬಾದ್‌ನಾದ್ಯಂತ ದಾಳಿ ನಡೆಸಿದ್ದು, ವಿವಿಧ ಪ್ರಕರಣದ ಆರೋಪಿಗಳು ಮತ್ತು ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ.
ಕಳೆದ ತಿಂಗಳು, ಎನ್‌ಐಎ ಹೈದರಾಬಾದ್‌ನಲ್ಲಿ 27 ಜನರ ವಿರುದ್ಧ “ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಲು” ಸಂಚು ರೂಪಿಸಿದ ಪ್ರಕರಣವನ್ನು ದಾಖಲಿಸಿತ್ತು. ಅಬ್ದುಲ್ ಖಾದರ್ ಮತ್ತು ಇತರ 26 ಮಂದಿ ವಿರುದ್ಧ ನಿಜಾಮಾಬಾದ್‌ನ ಆಟೋ ನಗರದಲ್ಲಿರುವ ಖಾದರ್ ಅವರ ಮನೆಯಲ್ಲಿ ‘ದೇಶ ವಿರೋಧಿ ಚಟುವಟಿಕೆ’ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಮೂಲಗಳ ಪ್ರಕಾರ ಅಬ್ದುಲ್ ಖಾದರ್ ಅವರು ಪಿಎಫ್‌ಐ ಸದಸ್ಯರಿಗೆ ಅವರ ಸಭೆ ಮತ್ತು ತರಬೇತಿಗಾಗಿ 6 ಲಕ್ಷ ರೂ ನೀಡಿದ್ದಲ್ಲದೇ ಬದಲಾಗಿ ತಮ್ಮ ಮನೆಯ ಛಾವಣಿಯ ಮೇಲೆ ಹೆಚ್ಚುವರಿ ಭಾಗವನ್ನು ನಿರ್ಮಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. "ಕ್ರಿಮಿನಲ್ ಪಿತೂರಿಯನ್ನು ಅನುಸರಿಸಿ, ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರನ್ನು ನೇಮಿಸಿಕೊಂಡರು, ಭಯೋತ್ಪಾದಕ ಕೃತ್ಯಗಳನ್ನು ಎಸಗಲು ತರಬೇತಿ ನೀಡಲು ಶಿಬಿರಗಳನ್ನು ಆಯೋಜಿಸಿದರು. ಅವರು ಕಾನೂನುಬಾಹಿರ ಸಭೆಯನ್ನು ನಡೆಸಿದ್ದಾರೆ. ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿ ತರಬೇತಿ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಪಿಎಫ್‌ಐ ಸದಸ್ಯರು ಕರಾಟೆ ತರಗತಿಗಳ ಹೆಸರಿನಲ್ಲಿ ಯುವಕರಿಗೆ ತರಬೇತಿ ಮತ್ತು ದೈಹಿಕ ವ್ಯಾಯಾಮಗಳನ್ನು ಪ್ರಾರಂಭಿಸಿದ್ದು, ಅವರ ದ್ವೇಷಪೂರಿತ ಭಾಷಣಗಳ ಮೂಲಕ ನಿರ್ದಿಷ್ಟ ಸಮುದಾಯದ ವಿರುದ್ಧ ಅವರನ್ನು ಪ್ರಚೋದಿಸುತ್ತಿದ್ದರು ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...