ಸರಾಯಿ ನಿಷೇಧಕ್ಕೆ ಗ್ರಾಮಸ್ಥರಿಂದ ಸಹಾಯಕ ಆಯುಕ್ತರಿಗೆ ಮನವಿ

Source: sonews | By Staff Correspondent | Published on 18th February 2020, 6:56 PM | Coastal News | Don't Miss |

ಭಟ್ಕಳ: ತಾಲೂಕಿನ ಶಿರಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಸರಾಯಿ ಮಾರಾಟ ಅವ್ಯಾಹತವಾಗಿ ನಡೆದಿದ್ದು ಇದರಿಂದಾಗಿ ಗ್ರಾಮೀಣ ಭಾಗದ ಯುವಕರು ಹಾಗೂ ಹಲವು ಕುಟುಂಬಗಳು ಬಲಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕೆಂದು ಆಗ್ರಹಿಸಿ ಮಣ್ಣುಹೊಂಡ ಗ್ರಾಮದ ಸಾರ್ವಜನಿಕರು ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹಾಗೂ ಅಬಕಾರಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿದ್ದಾರೆ.

ಶಿರಾಲಿ ಗ್ರಾ.ಪಂ ವ್ಯಾಪ್ತಿಯ ಮಣ್ಣುಹೊಂಡ ಗ್ರಾಮದ 5 ಅಂಗಡಿಗಳಲ್ಲಿ ಸರಾಯಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದ್ದು ಇದರಿಂದಾಗಿ ಹಲವು ಕುಟುಂಬಗಳು ಬೀದಿಪಾಲಾಗಿದ್ದು ಮಹಿಳೆಯರೂ ಮನೆಗಳಲ್ಲಿ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. 

ಈ ಕುರಿತಂತೆ ಗ್ರಾಮಸ್ಥರು ಸಭೆಯೊಂದನ್ನು ಮಾಡಿ ಸಾರಾಯಿ ಮಾರಾಟದ ವಿರುದ್ಧ ನಿರ್ಣಯವನ್ನು ಕೈಗೊಂಡಿದ್ದು ಇದನ್ನು ಮಾರಾಟಗಾರರಿಗೆ ಮನವರಿಕೆ ಮಾಡಿದ್ದಾಗ್ಯೂ ಸರಾಯಿ ವ್ಯಾಪಾರ ನಿಂತುಕೊಂಡಿಲ್ಲ. ಆದ್ದರಿಂದ ತಾಲೂಕಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸುವುದರ ಮೂಲಕ ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಮನವಿಪತ್ರದಲ್ಲಿ ತಿಳಿಸಲಾಗಿದೆ. 

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣ ನಾಯ್ಕ, ಬಿಳಿಯಾ ನಾಯ್ಕ, ದಿನೇಶ್ ನಾಯ್ಕ, ತಿಮ್ಮಯ್ಯ ನಾಯ್ಕೆ, ಗಣೇಶ ನಾಯ್ಕ ಲೋಕೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...