ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಅರ್ಜಿ ಆಹ್ವಾನ

Source: so news | By MV Bhatkal | Published on 17th June 2019, 5:52 PM | Coastal News | Don't Miss |

ಕಾರವಾರ : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2018 ರಿಂದ ಡಿಸೆಂಬರ 2018ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು, ಲೇಖಕರು, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು 2018 (ಪ್ರಥಮ, ದ್ವಿತೀಯ, ತೃತಿಯ) ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ  ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದ್ದು ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಜುಲೈ 15 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ದೂರವಾಣಿ ಸಂಖ್ಯೆ 080-22484516, 22107704 ಇವರಿಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ ಜೆ.ಸಿ. ರಸ್ತೆ, ಬೆಂಗಳೂರು-560002, ವೆಬ್‍ಸೈಟ್ ವಿಳಾಸ  www.kannadapustakapradhikara.com ದೂರವಾಣಿ ಸಂಖ್ಯೆ 080-22484516, 22107704  ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...