ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಅರ್ಜಿ ಆಹ್ವಾನ

Source: S O News | By I.G. Bhatkali | Published on 10th January 2022, 7:51 PM | Coastal News |

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2021 ರಿಂದ ಡಿಸೆಂಬರ್ 2021ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಕೃತಿಗಳ ಪ್ರಕಾಶಕರು / ಮುದ್ರಕರು / ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2021’  ಬಹುಮಾನವನ್ನು ನೀಡಲಾಗುತ್ತಿದ್ದು, ಆಸಕ್ತರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ,

ಪ್ರಕಟವಾದ ವರ್ಷ,  ಪುಸ್ತಕದ, ಲೇಖಕರ, ಪ್ರಕಾಶಕರ,  ಮುದ್ರಣಾಲಯದ ಹೆಸರು ಹಾಗೂ ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಫೆ. 10. ರೊಳಗಾಗಿ  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.  ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ  ಕಾರಣಕ್ಕೂ  ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ವೆಬ್ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom , ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next