ನ್ಯಾಯಾಡಳಿತದಲ್ಲಿ ತರಬೇತಿ ನೀಡಲು ಮತೀಯ  ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Source: sonews | By Staff Correspondent | Published on 29th July 2020, 4:28 PM | Coastal News |

ಕಾರವಾರ: ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಮತ್ತು ಜ್ಯೂಡಿಸಿಯಲ್ ಸೇವೆಗೆ ನ್ಯಾಯಾಡಳಿತದಲ್ಲಿ 4  ವರ್ಷಗಳ ತರಬೇತಿ ನೀಡಲು ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಿಸಲಾಗಿದೆ.  

ಆಸಕ್ತ ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರು ಅರ್ಜಿಯನ್ನು ಅಗಸ್ಟ್ 20 ರ ಒಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ  ಕಲ್ಯಾಣ ಅದಿsಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರಿಗೆ ಸಲ್ಲಿಸತಕ್ಕದ್ದು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಇದೇ ಕಛೇರಿಯಿಂದ ಪಡೆಯಬಹುದಾಗಿದೆ. 

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಾನೂನು ಪದವಿ ಪಾಸು ಮಾಡಿರಬೇಕು. ಮತೀಯ ಅಲ್ಪಸಂಖ್ಯಾತರ  ವರ್ಗಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿನ್, ಜೈನ್, ಬೌದ್ಧ ಮತ್ತು ಫಾರ್ಸಿ) ಸಮುದಾಯಕ್ಕೆ ಸೇರಿದವರಾಗಿದ್ದು ರಾಜ್ಯದ ನಿವಾಸಿಯಾಗಿರಬೇಕು. ವಕೀಲ ವೃತ್ತಿ ಅಭ್ಯಾಸ (ಪ್ರೆಕ್ಟೀಸ್) ನಿಗದಿಪಡಿಸಿರುವ ಅರ್ಹತೆ ಹೊಂದಿದ್ದು ತರಬೇತಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕಿಂತ ಮುಂಚಿತವಾಗಿ ಎರಡು ವರ್ಷದೊಳಗೆ ಬಾರ ಕೌನ್ಸಿಲ್ ನಲ್ಲಿ ಹೆಸರು ನೊಂದಾಯಿಸಿಕೊಂಡಿರತಕ್ಕದ್ದು. ಪಾಲಕರು/ಪೋಷಕರ ವಾರ್ಷಿಕ ಆದಾಯ ಮಿತಿ ರೂ.3.50ಲಕ್ಷ ಒಳಗಿರಬೇಕು. ಪ್ರವರ್ಗ-1 ರಡಿಯಲ್ಲಿ ಬರುವ ಮತೀಯ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆದಾಯ ಮಿತಿ ಇರುವುದಿಲ್ಲ.     ತರಬೇತಿ ಅವದಿsಯು ನಾಲ್ಕು ವರ್ಷವಾಗಿದ್ದು, ತರಬೇತಿ ಅವದಿsಯಲ್ಲಿ ಮಾಹೆಯಾನ ರೂ.5 ಸಾವಿರ ದಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಪಬ್ಲಿಕ್ ಪ್ರೊಸಿಕ್ಯೂಟರ್, ಸರಕಾರಿ ವಕೀಲರು ಇತರೇ ಯಾವುದೇ 20ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ  ಸಲ್ಲಿಸಿರುವ ವಕೀಲರ ಹತ್ತಿರ ತರಬೇತಿಗೆನ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಆದಾಯ, ಜಾತಿ ಪ್ರಮಾಣ ಪತ್ರ ನೀಡಿ ಆಯ್ಕೆಯಾಗಿರುವುದು ಕಂಡು ಬಂದಲ್ಲಿ ಶಿಕ್ಷೆಗೆ ಗುರಿಪಡಿಸಿ ತರಬೇತಿ ಭತ್ಯೆ ನೀಡಿರುವ ಒಟ್ಟು ಹಣದ ಜೊತೆಗೆ ಶೇಕಡಾ 10% ಬಡ್ಡಿ ಸೇರಿಸಿ ಕಂದಾಯ ಬಾಕಿ ರೂಪದಲ್ಲಿ ವಸೂಲು ಮಾಡಲಾಗುವುದು. ಅಪೂರ್ಣ ಹಾಗೂ ಸಕಾಲದಲ್ಲಿ ಬಾರದ  ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣಾಧಿಕಾರಿ ಬಸವರಾಜ ಬಡಿಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...