ಕಾರವಾರ: ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

Source: S.O. News service | By S O News | Published on 19th June 2021, 5:51 PM | Coastal News |

ಕಾರವಾರ: ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಾಗೂ ವಿವಿಧ ರೀತಿಯಲ್ಲಿ ಬೆಂಬಲ ನೀಡಲು ಮುಂದೆ ಬರುವ ವ್ಯಕ್ತಿಗಳನ್ನು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರೆಂದು ಗುರುತಿಸಿ ಅವರಿಗೆ ಯಶಸ್ವಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಸೂಕ್ತ ತರಬೇತಿ ನೀಡಲಾಗುವುದು.

ಕೋವಿಡ್-19ರ ಸಂಕಷ್ಟದ ಪರಿಸ್ಥಿತಿಯಲ್ಲಿ ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದು ಕೊಂಡಿರುವ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ ಅವರ ಸರ್ವತೋಮುಖ ಬೆಳವಣಿಗೆಗೆ ಬೆಂಬಲ ಹಾಗೂ ಸಹಾಯ ನೀಡಲು ಇದೊಂದು ಸುವರ್ಣಾವಕಾಶವಾಗಿರುತ್ತದೆ.

ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವವರಿಗೆ ಇಲಾಖೆಯಿಂದ ಯಾವುದೇ ಗೌರವಧನ/ ಶುಲ್ಕವನ್ನು ಪಾವತಿಸಲಾಗುವುದಿಲ್ಲ. ಇದೊಂದು ಸಾಮಾಜಿಕ ಜವಾಬ್ದಾರಿಯಾಗಿದ್ದು, ಸರ್ಕಾರದ ಬಾಲಹಿತೈಷಿ ಯೋಜನೆಯಡಿ ಆಸಕ್ತರು ಮಾರ್ಗದರ್ಶಕರಾಗಿ ಸೇವೆಯನ್ನು ಸಲ್ಲಿಸಲು ಜಾಲತಾಣ www.icps.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 26 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ ಇವರಿಗೆ ಸಲ್ಲಿಸಬಹುದಾಗಿದೆ.

ನಿಗಧಿತ ಅರ್ಜಿ ನಮೂನೆಯನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶ್ರೀಮತಿ ಪ್ರೇಮಾಬಾಯಿ ಪ್ರೇಮಾನಂದ ರಾಯ್ಕರ್ ಕಟ್ಟಡ, ಶಕ್ತಿ ಮೋಟರ್ಸ ಹಿಂಬಾಗ, ಒಉ ರಸ್ತೆ, ಕಾರವಾರ ವಿಳಾಸಕ್ಕೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂ. 08382-220182 ಅಥವಾ 7349113913 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...