ಕಾರವಾರ: ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Source: S.O. News service | By S O News | Published on 2nd August 2021, 8:19 PM | Coastal News |

ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ ಅಂಬೇಡ್ಕರ್ ವಸತಿ ಶಾಲೆ, ಡಾ:ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿನ 6 ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ 5ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ಅಗಸ್ಟ್ 10 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಪ್ಟೆಂಬರ್ 16 ಕ್ಕೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಅಗಸ್ಟ್ 4 ರಿಂದ 13 ರೊಳಗೆ ಅರ್ಜಿ ಸಲ್ಲಿಸಿದ ವಸತಿ ಶಾಲೆಯಿಂದ ಡೌನ್‍ಲೋಡ್ ಮಾಡಿಕೊಳ್ಳುಳಬೇಕು.

ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕ 2021ನ್ನು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಪರಿಶೀಲಿಸಬಹುದು ಎಂದು ಸಮಾಜ ಕಲ್ಯಾಣ ಇಲ್ಯಾಖೆಯ ಉಪ ನಿರ್ದೇಶಕ ಎಸ್ ಪುರುಷೋತ್ತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...