ಮುಂಡಗೋಡ ಡಿಪ್ಲೊಮಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

Source: S.O. News Service | Published on 20th July 2019, 9:36 PM | Coastal News | Don't Miss |

ಕಾರವಾರ: ಮೊಂಡಗೋಡ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2019-20ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಪ್ರವೇಶ ಪಡೆದು ಖಾಲಿ ಉಳಿದಿರುವ ಸೀಟುಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಅರ್ಜಿ ಆಹ್ವಾನಿಸಲಾಗಿದೆ.
ಎರಡು ವರ್ಷಗಳ ಐಟಿಐ ಹಾಗೂ ಪಿಯುಸಿ (ವಿಜ್ಞಾನ ಅಥವಾ ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 30-07-2019ರೊಳಗೆ ತಾಂತ್ರಿಕ ಶಿಕ್ಷಣ ಇಲಾಖೆ ವೆಬ್‍ಸೈಟ್ www.dte.kar.nic.in ಇಲ್ಲಿಂದ ಅರ್ಜಿನಮೂನೆಯನ್ನು ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ. ದಿನಾಂಕ 31-07-2019ರಂದು ಬೆಳಿಗ್ಗೆ 10.30ಕ್ಕೆ ಮೆರಿಟ್ ಪಟ್ಟಿಯನ್ನು ಕಾಲೇಜಿನಲ್ಲಿ ಪ್ರಕಟಿಸಲಿದ್ದು ಅಂದೇ ಮಧ್ಯಾಹ್ನ 2.30ಕ್ಕೆ  ಕೌನ್ಸೆಲಿಂಗ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಪ್ರವೇಶ ಪಡೆಯಬಹುದಾಗಿದೆ ಎಂದು ಮುಂಡಗೋಡ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು - ಸಚಿವ ಜಗದೀಶ ಶೆಟ್ಟರ್