ಪ.ಪಂಗಡ - ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

Source: S.O. News Service | Published on 6th August 2019, 7:38 PM | Coastal News | Don't Miss |

ಮಂಗಳೂರು:2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2)  ಸಮಾಜ ಕಲ್ಯಾಣ ಇಲಾಖೆ, ಇವರಿಂದ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗೊಂದಿಗೆ ಆಗಸ್ಟ್ 26 ರಂದು ಸಂಜೆ 5.30ರೊಳಗೆ ಸಲ್ಲಿಸಬೇಕು. 
ಷರತ್ತುಗಳು:  ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ ಪಡೆಯುವ ಅರ್ಜಿದಾರ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು ಅರ್ಜಿದಾರರ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ  ಈ ಹಿಂದೆ ಯಾವುದೇ ಇಲಾಖೆ/ನಿಗಮದಿಂದ ಯಾವುದೇ ಯೋಜನೆಯಡಿ ಸೌಲಭ್ಯವನ್ನು ಪಡೆದಿರಬಾರದು. ಪಡೆದ ಘಟಕ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು. ಅರ್ಜಿದಾರರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು. ಹೈನುಗಾರಿಕೆ ಮತ್ತು ಕುರಿ, ಮೇಕೆ ಘಟಕಗಳನ್ನು ಮಹಿಳೆಯವರಿಗೆ ಮಾತ್ರ ನೀಡಲಾಗುವುದು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್(ಲಘು/ಭಾರಿ)ಹೊಂದಿರಬೇಕು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶವಾದಲ್ಲಿ ರೂ.1.50 ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.2 ಲಕ್ಷ ಮಿತಿಯೊಳಗಿರಬೇಕು ಎಂದು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...