ಸಿಇಟಿ ಪರೀಕ್ಷೆ ತರಬೇತಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Source: so news | Published on 19th October 2019, 11:55 AM | State News | NewsVoir |


ಹಾವೇರಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ 2019-20ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿಯು ಏಳು ತಿಂಗಳದಾಗಿದ್ದು, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ತರಬೇತಿ ಪಡೆಯಲು ಅರ್ಹರಾಗಿದ್ದಾರೆ ಹಾಗೂ ಪ್ರಾಂಶುಪಾಲರಿಂದ ದೃಢೀಕರಣ ಪತ್ರ ಪಡೆದಿರಬೇಕು. ಕುಟುಂಬ ವಾರ್ಷಿಕ ಆದಾಯ 3.50 ಲಕ್ಷ ರೂ.ದೊಳಗಿರಬೇಕು. ಸದರಿ ಯೋಜನೆಯಡಿ ಕೇವಲ ಒಂದು ಬಾರಿ ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆಯೊಂದಿಗೆ ಬ್ಯಾಂಕ್ ಪಾಸ್‍ಬುಕ್, ಆಧಾರ್ ಕಾರ್ಡ್ ಹಾಗೂ ಇತ್ತೀಚಿನ ನಾಲ್ಕು ಭಾವಚಿತ್ರಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಮೌಲಾನಾ ಆಜಾದ ಭವನ, ಶಿವಾಜಿನಗರ, 3ನೇ ಕ್ರಾಸ್, ಹಾವೇರಿ ಅಥವಾ ಬ್ಯಾಡಗಿ. ರಾಣೇಬೆನ್ನೂರು, ಹಾನಗಲ್, ಹಿರೇಕೆರೂರು, ಶಿಗ್ಗಾಂವ ಹಾಗೂ ಸವಣೂರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15-11-2019ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-234505ನ್ನು ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ ಅವರು ತಿಳಿಸಿದ್ದಾರೆ.

Read These Next

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ...

ಐ.ಟಿ.ಎಫ್ ಕಲಬುರಗಿ ಓಪನ್-2023ಗೆ ತೆರೆ. ಕಲಬುರಗಿಯಲ್ಲಿ ಟೆನಿಸ್ ತರಬೇತಿ ಕೇಂದ್ರ ಸ್ಥಾಪಿಸಿ: ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ...

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಓ ಸ್ವರೂಪ ಟಿ.ಕೆ.

ಧಾರವಾಡ : ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...