ಪ.ವರ್ಗದ ಫಲಾನುಭವಿಗಳಿಂದ ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ      

Source: sonews | By Staff Correspondent | Published on 6th August 2020, 7:40 PM | Coastal News |

ಕಾರವಾರ: ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ವರ್ಗದ ಫಲಾನುಭವಿಗಳು ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. 

ಈ ಯೋಜನೆಯಡಿ ಕೈಗಾರಿಕೆ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಅವಕಾಶವಿದ್ದು, ಶೇ.60 ಸಹಾಯಧನ ಲಭ್ಯವಿದ್ದು, ನಿಗದಿತ ಅರ್ಜಿ ನಮೂನೆ-ಡಿಯಲ್ಲಿ ಜಾತಿ ಪ್ರಮಾಣ ಪತ್ರ, ವಿದ್ಯಾಭ್ಯಾಸ ಪ್ರಮಾಣ ಪತ್ರ, ಆಧಾರ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ವಿವರವಾದ ಯೋಜನಾ ವರದಿಯೊಂದಿಗೆ ಅಗಸ್ಟ್ 31ರೊಳಗಾಗಿ ಅರ್ಜಿ ಕಳುಹಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 

Read These Next