ಜಾನಪದ ಕಲೆ ಹಾಗೂ ರಂಗತರಬೇತಿಗಾಗಿ ಅರ್ಜಿ ಆಹ್ವಾನ

Source: sonews | By Staff Correspondent | Published on 20th November 2019, 8:45 PM | Coastal News | Don't Miss |

ಜಾನಪದ ಕಲಾ ತರಬೇತಿಗಾಗಿ ಅರ್ಜಿ ಆಹ್ವನ

ಕಾರವಾರ: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ವಿವಿಧ ಜಾನಪದ ಕಲೆಗಳು ಹಾಗೂ ಜಾನಪದ ಗಾಯನಗಳ ಬಗ್ಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಡಿಸೆಂಬರ್ 10 ಕೊನೆಯ ದಿನವಾಗಿರುತ್ತದೆ.
   
ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿನವರಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿಗಳನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ ಸಿ ರಸ್ತೆ, ಬೆಂಗಳೂರು ಹಾಗೂ ಜಿಲ್ಲಾ ಸಹಾಯಕ ನಿರ್ದೇಶಕರುಗಳ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 080-22215509 ಗೆ ಸಂಪರ್ಕಿಸಬಹುದಾಗಿದೆ.
     

ರಂಗತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ನಾಟಕ ಅಕಾಡೆಮಿಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರಂಗಭೂಮಿಯ ಬಗ್ಗೆ ಅನುಭವವಿರುವ ಅಭ್ಯರ್ಥಿಗಳಿಗೆ ವಸತಿ ಸಹಿತ ತರಬೇತಿ ಶಿಬಿರ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 
  
ಅರ್ಜಿ ಸಲ್ಲಿಸಬಯಸುವವರು 18 ರಿಂದ 40 ವರ್ಷ ವಯೋಮಿತಿ ಹೊಂದಿರಬೇಕು. ಮಹಿಳೆಯರು ಮತ್ತು ಶಿಕ್ಷಕರಿಗೆ ಹೆಚಿನ ಆಧ್ಯತೆ ನೀಡಲಾಗುವುದು. ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಹಾಗೂ ತಮ್ಮ ಪೂರ್ಣ ವಿವರಗಳೊಂದಿಗೆ ಡಿಸೆಂಬರ್ 10 ರೊಳಗಾಗಿ ರಿಜಿಸ್ಟ್ರಾರ್ ನಾಟಕ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು-560002 ಗೆ ಅರ್ಜಿ ಸಲ್ಲಿಸಬಹುದಾಗಿದೆ.
     
ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ವೆಬ್‍ಸೈಟ್ www.karnatakanatakaacademy.comಗೆ ಸಂಪರ್ಕಿಸಬಹುದಾಗಿದೆ.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...