ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Source: SO News | By Laxmi Tanaya | Published on 12th October 2021, 10:01 PM | Coastal News | Don't Miss |

ಮಂಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2021-22ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ, ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಪರಿಶಿಷ್ಟ ಜಾತಿಯ ಎರಡು ಹಾಗೂ ಪರಿಶಿಷ್ಟ ಪಂಗಡದ ಒಬ್ಬರು ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ಮೀಸಲಾಗಿರುವ ಈ ತರಬೇತಿಯ ಅವಧಿ 10 ತಿಂಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/- ರೂ.ಗಳ ಶಿಷ್ಯವೇತನ ನೀಡಲಾಗುವುದು.

   ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು.

   ಅಭ್ಯರ್ಥಿಗಳು ದಕ್ಷಿಣ ಜಿಲ್ಲೆಯವರಾಗಿರಬೇಕು. ದಕ್ಷಿಣ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

   ಅಭ್ಯರ್ಥಿಗಳು 40 ವರ್ಷ ವಯೋಮಿತಿ ಮೀರಿರಬಾರದು ಹಾಗೂ ಈ ತರಬೇತಿಯು ಹತ್ತು ತಿಂಗಳ ಅವಧಿಯದ್ದಾಗಿದ್ದು, ತಾತ್ಕಾಲಿಕವಾಗಿರುತ್ತದೆ.
   ಅರ್ಹರು ತಮ್ಮ ಸ್ವ-ವಿವರ, 3-ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು 3 ಪ್ರತಿಗಳೊಂದಿಗೆ, ನವೆಂಬರ್ 08 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪಿಡಬ್ಲ್ಯೂಡಿ ಕಟ್ಟಡ, 2ನೇ ಮಹಡಿ, ನೆಹರೂ ಮೈದಾನದ  ಎದುರು, ದಕ್ಷಿಣ ಕನ್ನಡ, ಮಂಗಳೂರು ಇಲ್ಲಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-2424254 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...