ಕಾರವಾರ: ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 20th January 2021, 1:27 PM | Coastal News |

ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ, ಹಿಂದೂಸ್ತಾನಿ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾ ಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ/ಅಬ್ಯಾಸ ಮಾಡುತ್ತಿರುವ/ ಹೆಚ್ಚಿನ ಅಬ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

14 ರಿಂದ 26 ವರ್ಷದೊಳಗಿನ ಅಭ್ಯರ್ಥಿಗಳು ಅಕಾಡೆಮಿ (ಕಚೇರಿ ವೇಳೆ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ), ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ  ಅಥವಾ ವೆಬ್‍ಸೈಟ್ : https://karnatakasangeetanrityaacademy.com ನಲ್ಲಿ ಅರ್ಜಿ ಪಡೆಯಬಹುದು.

ಭರ್ತಿಯಾದ ಅರ್ಜಿಯನ್ನು ಜ. 30ರೊಳಗಾಗಿ ರಿಜಿಸ್ಟರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ,2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22215073ಗೆ ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next