ಅಸಾಧಾರಣ ಸಾಧನೆಯ ರಾಷ್ಟ ಪ್ರಶಸ್ತಿಗೆ ಅರ್ಜಿ ಆಹ್ವಾನ

Source: sonews | By Staff Correspondent | Published on 23rd August 2019, 6:46 PM | Coastal News |

ಕಾರವಾರ:  ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರಕ್ಕಾಗಿ ಅರ್ಹ ಮಕ್ಕಳು/ಸಂಸ್ಥೆ/ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬಯಸುವವರು ಭಾರತ ಸರ್ಕಾರದ ಇತ್ತೀಚಿನ ಅನುಸೂಚಿಯ ಪ್ರಕಾರ ತಮ್ಮ ಅರ್ಜಿಯನ್ನು ಅಧಿಕೃತ ವೆಬ್‍ಸೈಟ್ www.nca-wcd.nic.in  ನಲ್ಲಿ ನೇರವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. 

ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ 2019ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ರೂ. 25,000 ಹಾಗೂ ಸಂಸ್ಥೆಗಳಿಗೆ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವವರು ಉಪ ನಿರ್ದೆಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...