ಸಮುದ್ರ ಪಂಜರ ಕೃಷಿಯ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

Source: SO News | By Laxmi Tanaya | Published on 19th October 2020, 7:05 PM | Coastal News | Don't Miss |

ಕಾರವಾರ : ಕಾರವಾರ ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಸ್ಟೇಶನ್ ಕಛೇರಿ ವತಿಯಿಂದ ಸಮುದ್ರ ಪಂಜರ ಕೃಷಿಯ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಕಾರ್ಯಕ್ರಮಕ್ಕಾಗಿ "ಅಖಿಲ ಭಾರತ ಜಾಲ ಯೋಜನೆ-ಸಮುದ್ರ ಕೃಷಿ" ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

    ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗಾಗಿ ಸಮುದ್ರ ಪಂಜರ ಕೃಷಿಯ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಕಾರ್ಯಕ್ರಮಕ್ಕಾಗಿ ವೈಯಕ್ತಿಕ, ಸ್ವಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅನುದಾನವು ಸೀಮಿತವಾಗಿರುವದರಿಂದ ಈಗಾಗಲೇ ಐ.ಸಿ.ಎ.ಆರ್ ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಅಥವಾ ರಾಜ್ಯ ಸರಕಾರಿ ಸಂಸ್ಥೆಗಳಿಂದ ತರಬೇತಿ ಪಡೆದವರಿಗೆ ಮತ್ತು ಸಿ.ಎಮ್.ಎಫ್.ಆರ್.ಐ ಕಾರವಾರ ಕಛೇರಿಯಲ್ಲಿ ನೋಂದಣಿ ವೇಳೆಯ ಆಧಾರದ ಮೇಲೆ ಆದ್ಯತೆ ನೀಡಲಾಗುವುದು.

    ಆಸಕ್ತ ಫಲಾನುಭವಿಗಳು ಕಛೇರಿಯ ವೇಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ಒಳಗಾಗಿ ಪೋನ್ ನಂ. 9448576451, 9148757203ಕ್ಕೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದ್ದು.  ತಮ್ಮ  ಅನುಭವದ ಪ್ರಮಾಣ ಪತ್ರ, ದಾಖಲೆಗಳೊಂದಿಗೆ ಆಧಾರ್ ಕಾರ್ಡ ಪ್ರತಿಯನ್ನು ಅಂಚೆಯ ಮೂಲಕ ಪ್ರಭಾರ ವಿಜ್ಞಾನಿಗಳು, ಐ.ಸಿ.ಎ.ಆರ್-ಸಿ.ಎಮ್.ಎಫ್.ಆರ್.ಐ ಪ್ರಾದೇಶಿಕ ಸ್ಟೇಶನ್, ಪಿ.ಬಿ.ನಂ.05, ಕಾರವಾರ-581 302, ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...