ಸ್ವ ಉದ್ಯೋಗ ತರಬೇತಿಗೆ ಅರ್ಜಿ ಅಹ್ವಾನ

Source: so news | By MV Bhatkal | Published on 11th April 2019, 12:33 AM | Coastal News | Don't Miss |

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾಬ್ಯಾಂಕ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಲ್ಲಿ ಬರುವ ಏಪ್ರಿಲ್ ತಿಂಗಳಲ್ಲಿ ಆರಂಭವಾಗುವ ಹಪ್ಪಳ, ಉಪ್ಪಿನಕಾಯಿ ಹಾಗೂ ಮಸಾಲಾ ಸಾಂಬಾರ ಪದಾರ್ಥಗಳ ತಯಾರಿಕೆ ತರಬೇತಿಗೆ ಅರ್ಹ ಅಭ್ರ್ಯಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈ ತರಬೇತಿಯು ಊಟ-ವಸತಿ ಸಹಿತ ಉಚಿತವಾಗಿದೆ. ಆಸಕ್ತಿ ಇರುವ 18 ರಿಂದ 45 ವರ್ಷವಯೋಮಿತಿಯ, ಯುವಕರು ಅರ್ಜಿಯನ್ನು ಹಾಕಬಹುದು.
ತರಬೇತಿ ಪಡೆಯಲಿಚ್ಚಿಸುವವರು ಕೆನರಾ ಬ್ಯಾಂಕ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖೈ 9483485489, 9482188780, 08284-220807 ಸಂಪರ್ಕಿಸಲು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...