ಕಾರವಾರ : ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ವ್ಯಾಪ್ತಿ ವಿಶೆಷ ಸಾಧನೆ ಮಾಡಿರುವ ತಾಲೂಕಿನ ರೈತರು ಹಾಗೂ ರೈತ ಮಹಿಳೆಯರಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯ ಜೊತೆಗೆ ಕೃಷಿ ಹಾಗೂ ಕೃಷಿ ಹಾಗೂ ಕೃಷಿ ಸಂಬಂಧಿಸಿದ ಚಟುವಟಿಕೆಗಳ ಅಡಿ ಮಾಡಿರುವ ವಿಶೇಷ ಸಾಧನೆಗಳ ಕುರಿತು ದಾಖಲೆಯ ಪ್ರತಿಯನ್ನು ಲಗತ್ತಿಸಬೇಕು ಹಾಗೂ ಕೈಗೊಂಡ ಚಟುವಟಿಕೆ ಪ್ರಸುತ್ತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆ ಮತ್ತು ಅಳವಡಿಕೆಗೆ ಸಹಕಾರಿಯಾಗುವಂತಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ್ 31 ಆಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.