ಕಾರವಾರ: ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 8th September 2021, 3:52 PM | Coastal News |

ಕಾರವಾರ:  ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಶಿರಸಿಯ ಅರಣ್ಯ ಮಹಾವಿದ್ಯಾಲಯದ ಜೂನಿಯರ್ ರಿಸರ್ಚ್ ಫೇಲೋ ವಿಭಾಗಕ್ಕೆ ಭೋದಿಸಲು ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ಹುದ್ದೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗೆ ಅನುಸಾರ ವಿದ್ಯಾರ್ಹತೆ ಹೊಂದಿದÀ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಕೃಷಿ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದಂತೆ 31,000ರೂ ಹಾಗೂ ಊಖಂ ನೀಡಲಾಗುವುದು.

ಆಸ್ತಕರು ಶಿರಸಿಯ ಅರಣ್ಯ ಮಹಾವಿದ್ಯಾಲಯದ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳು ಹಾಗೂ ಅವುಗಳ ಎರಡು ಧೃಡಿಕೃತ ಪ್ರತಿಗಳೊಂದಿಗೆ ನೀಡಬೇಕು. ಸೆ.21ರಂದು ಬೆಳಿಗ್ಗೆ 11ಕ್ಕೆ ನಡೆಯುವ ಸಂದರ್ಶಕ್ಕೆ ಎಲ್ಲ ಮೂಲ ದಾಖಲಾತಿಗಳ 2 ಧೃಡಿಕೃತ ಪ್ರತಿಗಳೊಂದಿಗೆ ಹಾಜರಾಗಬೇಕು.

ಅರ್ಜಿಯನ್ನು ಮುಂಗಡವಾಗಿ ಕಳುಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08384-226146ಗೆ ಸಂಪರ್ಕಿಸಬಹುದು ಎಂದು ಶಿರಸಿಯ ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...