ಕಾರವಾರ :ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Source: so news | By Manju Naik | Published on 19th June 2019, 9:45 PM | Coastal News | Don't Miss |

ಕಾರವಾರ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2019-20 ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಮತ್ತು ಪರಿಶಿಷ್ಟ ಪಂಗಡಗಳ   ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನೂಕೂಲವಾಗುವಂತೆ ಗಂಗಾ ಕಲ್ಯಾಣ ಯೋಜನೆಯನ್ನು ಹಾಗೂ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆಗಳಡಿಯಲ್ಲಿ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿಗಳನ್ನು ಈಗಾಗಲೇ ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿ ಸ್ವೀಕರಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು : 
ಅರ್ಜಿದಾರರು ಪರಿಶಿಷ್ಟ ಜಾತಿ ಭೋವಿ ಹಾಗೂ ಪರಿಶಿಷ್ಟ ಪಂಗಡಗಳ ಜನಾಂಗಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. (ಪ್ರತಿ ಲಗತ್ತಿಸಬೇಕು.)
ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಾನದವರಾಗಿಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000/- ಮತ್ತು ನಗರ ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು.
ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಪರಿಶಿಷ್ಟ ಜಾತಿ ಭೋವಿ ಹಾಗೂ ಪರಿಶಿಷ್ಟ ಪಂಗಡಗಳ  ಜನಾಂಗದ ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ನಿಗದಿಪಡಿಸಿದ ಒಟ್ಟು ಗುರಿಯಲ್ಲಿ ಶೇ.5ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು.
ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್‍ನೊಂದಿಗೆ ಬ್ಯಾಡ್ಜ್ ಅನ್ನೂ  ಹೊಂದಿರಬೇಕು.
ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಕನಿಷ್ಟ 1-20 ಎಕರೆಯಿಂದ ಗರಿಷ್ಟ 5-00 ಎಕರೆ ಜಮೀನು ಹೊಂದಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.
ಅರ್ಜಿದಾರರು ಅರ್ಜಿಯೊಂದಿಗೆ  ಪಾಸ್ ಪೋರ್ಟ ಅಳತೆಯ ಭಾವ ಚಿತ್ರ,  ಆರ್‍ಡಿ ಸಂಖ್ಯೆ ಇರುವ ತಹಶಿಲ್ದಾರ್ ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಹಾಗೂ ಕುಟುಂಬದ ವಾರ್ಷಿಕ ವರಮಾನ ಪತ್ರ,  ಪಡೀತರ ಚೀಟಿ ಮತ್ತು ಆಧಾರ್ ಕಾರ್ಡ್,  ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ಪಾಸ್ ಪುಸ್ತಕದ ಮೊದಲ ಪುಟದ ಪ್ರತಿ, ಯೋಜನಾ ವರದಿ / ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ),  ವಾಹನವಾಗಿದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಾಹನ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್‍ನ ಹಾಗೂ ವಯಸ್ಸು 50 ವರ್ಷದೊಳಗಿರುವ ಬಗ್ಗೆ ದೃಢೀಕರಣ ಪತ್ರ,  ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಚಾಲ್ತಿ ಪಹಣಿ (ಆರ್.ಟಿ.ಸಿ.ಜೆರಾಕ್ಸ್) ಮತ್ತು ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಪೂರ್ಣವಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ  ಮತ್ತು ಮಧ್ಯವರ್ತಿಗಳನ್ನು ಸಂಪರ್ಕಿಸದಿರುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ  ಕರ್ನಾಟಕ ಭೋವಿ ಅಬಿವೃದ್ಧಿ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು,  ಹಳೇ ಜಿಲ್ಲಾ ಪಂಚಾಯತ್ ಕಛೇರಿ, ತಹಸೀಲ್ದಾರ ಕಛೇರಿ ಹಿಂಭಾಗ  ನೆಲಮಹಡಿ, ಕಾರವಾರ,  ದೂರವಾಣಿ ಸಂಖ್ಯೆ  08382-226903 ಸಂಪರ್ಕಿಸಬಹುದಾಗಿದೆ. 

 

Read These Next