ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.
ಬೆಂಗಳೂರು : ಅಲ್ಪಸಂಖ್ಯಾತ ವರ್ಗದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಆನಲೈನ್ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. 2023-24ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯ ಅಲ್ಪಸಂಖ್ಯಾತ ಇಲಾಖೆಯಡಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ.)ದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ (ಎಸ್.ಎಸ್.ಪಿ.) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅಕ್ಟೋಬರ್ 31 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವೆಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂಪಾಯಿ ಮೀರಿರಬಾರದು. ಕಳೆದ ವರ್ಷ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳನ್ನು ಆಟೋ ರಿನೀವಲ್ ಎಂದು ಪರಿಗಣಿಸಲಾಗುತ್ತಿದ್ದು, ಅಂತಹ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿಲ್ಲ. ಕಳೆದ ಬಾರಿ ಅರ್ಜಿ ಸಲ್ಲಿಸಿಯೂ ವಿದ್ಯಾರ್ಥಿ ವೇತನ ಬಾರದೆ ಇರುವ ವಿದ್ಯಾರ್ಥಿಗಳು ಈ ಬಾರಿ ಹೊಸ (ಫ್ರೆಶ್) ಅರ್ಜಿ ಸಲ್ಲಿಸಬೇಕು. ಸದ್ರಿ ವಿದ್ಯಾರ್ಥಿ ವೇತಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್ ಪಿ ಸಿ ಐ ಮ್ಯಾಪಿಂಗ್ ಸಕ್ರಿಯವಾಗಿರುವುದು ಕಡ್ಡಾಯವಾಗಿದೆ.
ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋಸ್ಟ್ ಮೆಟ್ರಿಕ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಅಲ್ಪಸಂಖ್ಯಾತ ಇಲಾಖಾ ವೈಬ್ ಸೈಟ್, ಸಹಾಯವಾಣಿ, ಅಲ್ಪಸಂಖ್ಯಾತ ತಾಲೂಕು ಮಟ್ಟದ ಮಾಹಿತಿ ಕೇಂದ್ರ ಅಥವಾ ಎಸ್.ಎಸ್.ಪಿ. ಪೋರ್ಟಲ್ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಇಲಾಖಾ ಕಚೇರಿ ಪ್ರಕಟಣೆ ತಿಳಿಸಲಾಗಿದೆ.