ಕಾರವಾರ:: ಮೊರಾರ್ಜಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Source: S O News Service | By I.G. Bhatkali | Published on 19th April 2019, 11:22 PM | Coastal News |

ಕಾರವಾರ: 2018-19ನೇ ಸಾಲಿನ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ 6 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಆಸಕ್ತ ವಿದ್ಯಾರ್ಥಿಗಳು ದಿನಾಂಕ 15-04-2019ರಿಂದ 29-04-2019ರ ಸಂಜೆ 4ಗಂಟೆವರೆಗೆ ನಿಗದಿ ಅರ್ಜಿ ನಮೂನೆಯನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲೂಕು ವಸತಿ ಶಾಲೆಯ ಪ್ರಾಂಶುಪಾಲರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30-04-2019ರೊಳಗೆ ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...