ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಅರ್ಜಿ ಆಹ್ವಾನ                                                         

Source: sonews | By Staff Correspondent | Published on 22nd September 2020, 7:48 PM | State News |

ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು  ರಾಮನಗರ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ  ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಹಾಗೂ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.  ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ.  ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.  ಪ್ರವೇಶ ಪಡೆಯುವ ಕೊನೆಯ ದಿನಾಂಕ    30-9-2020.  ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಶಿಷ್ಯ ವೇತನ ನೀಡಲಾಗುವುದು ಹಾಗೂ 30 ವರ್ಷದ ಒಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಶಿಷ್ಟಯ ವೇತನ ನೀಡಲಾಗುವುದು.

ಡಿಪ್ಲೋಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳ ಉದ್ಯೋಗ ನೇಮಕಾತಿ ಮಾಡುವ ಸಂದರ್ಭದದಲ್ಲಿ ಪ್ರಥಮ ಆದ್ಯತೆ ನೀಡಲಾಗವುದು ಮತ್ತು ಡಿ.ಸಿ.ಎಂ. ಕೋರ್ಸಿನ ಪಠ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ನೇಮಕಾತಿಯ ಸ್ವರ್ಧಾತ್ಮಕ ಪರೀಕ್ಷೆಗೆ ಹಾಗೂ ಇನ್ನಿತರೆ ಹುದ್ದೆಗಳಿಗೆ ಅನುಕೂಲವಾಗುತ್ತದೆ.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 080-26602046, 9902189872, 9036259781, 8550017134. ಅರ್ಜಿ ದೊರೆಯುವ ಸ್ಥಳ : ಕೆ.ಐ.ಸಿ.ಎಂ. ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ. 1/3, 2 ನೇ ಮಹಡಿ, 3 ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18 ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...