ಬೆಂಗಳೂರು: ವಿವಿಧ ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.
ಹಾಸನ, ಕೊಡಗು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ದಾವಣಗೆರೆ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಜೈನ್, ಕ್ರಿಸ್ಚಿಯನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದ ವಿದ್ಯಾರ್ಥಿಗಳ ಪೋಷಕರು ಈ ಜಿಲ್ಲೆಗಳ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ / ಸದರಿ ಜಿಲ್ಲೆಗಳ ವಸತಿ ಶಾಲೆಗಳ ಪ್ರಾಂಶುಪಾಲರು / ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.