ಕಾರವಾರ: ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ

Source: S O News | By I.G. Bhatkali | Published on 10th January 2024, 1:27 PM | Coastal News | Don't Miss |

ಕಾರವಾರ: ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು , ಬಿಇ ಇನ್ ಮೆಕ್ಯಾನಿಕಲ್ / ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಲೆಕ್ಟ್ರಿಕಲ್ಸ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಕಂಪ್ಯೂಟರ್  ಸೈನ್ಸ್ ಇಂಜಿನಿಯರಿಂಗ್, ಎಂಟೆಕ್ ಇನ್ ಮೆಕ್ಯಾನಿಕಲ್ /ಟೂಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಸ್.ಸಿ ಗಣಿತ ಹಾಗೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಜಿಟಿಟಿಸಿ ಜಾಲತಾಣ : https://gttc.karnataka.gov.in ದಲ್ಲಿ ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 16 ರ ಸಂಜೆ 5 ಗಂಟೆಯೊಳಗೆ ಸಂಬಂದಿಸಿದ  ದಾಖಲೆಗಳೊಂದಿಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಜಾಜಿನಗರ ಕೈಗಾರಿಕಾ ವಸಾಹತು, ಬೆಂಗಳೂರು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂ : 080-23507448 ಇ-ಮೇಲ್ : [email protected] ಗೆ ಸಂಪರ್ಕಿಸಿ ಪಡೆಯಬಹುದು ಎಂದು ದಾಂಡೇಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...