ಕಾರವಾರ; ಕೃಷಿ ವಿಕಾಸ ಯೋಜನೆ; ಅರ್ಜಿ ​ಆಹ್ವಾನ

Source: S O News service | By I.G. Bhatkali | Published on 25th September 2021, 6:31 PM | Coastal News | Don't Miss |

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2021-22 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ   ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ  ಅರ್ಹ ಪಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಕ್ಟೋಬರ 7 ಕೊನೆಯ ದಿನವಾಗಿದ್ದು, ಅರ್ಹ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.62,000  ಇದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33 ರೂ.20665  ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25 ರೂ. 15,500 ಗಳ ಸಹಾಯಧನ ಒದಗಿಸಲಾಗುವುದು. 

ಘಟಕದ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯಬಹುದಾಗಿದೆ. ಫಲಾನುಭವಿ ಆಧಾರಿತ ಕಾರ್ಯಕ್ರಮಕ್ಕೆ ಆದ್ಯತೆ ಮೇರೆಗೆ ಕೂಲಿ, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು  ಫಲಾನುಭವಿಗಳನ್ನಾಗಿ   ಆಯ್ಕೆ ಮಾಡಲಾಗುವುದು, 

ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ಅಂಗವೀಕಲರಿಗೆ ಶೇ.3 ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಆಯಾ  ತಾಲೂಕಿನ ಪಶುಪಾಲನೆ ಮತ್ತು ಪಶುವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ,  ಮುಖ್ಯ ಪಶುವೈದ್ಯಾಧಿಕಾರಿ, ಪಶು ಆಸ್ಪತ್ರೆಗಳನ್ನು   ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ನಂದಕುಮಾರ ಪೈ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...