ಕಾರವಾರ: ಪಿಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 20th January 2021, 1:16 PM | Coastal News | Don't Miss |

ಕಾರವಾರ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಡಿ.ಎಸ್.ಟಿ. ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ-ಪಿಹೆಚ್.ಡಿ ಶಿಷ್ಯವೇತನ' ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ  ಸೊಸೈಟಿಯ ಮುಖಾಂತರ ಅನುಸ್ತಾನಗೊಳಿಸುತ್ತಿದೆ.

2020-21ನೇ ಸಾಲಿನಲ್ಲಿ ಸದರಿ ಯೋಜನೆಯಡಿ  ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ ಕಾಲೇಜುಗಳಲ್ಲಿ  ಈಗಾಗಲೇ ಪಿಹೆಚ್.ಡಿ ಪದವಿಗೆ ನೋಂದಾಯಿತ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  

ಆನ್‍ಲೈನ್ ಅರ್ಜಿಯನ್ನು ಫೆ.10 ರಂದು ಸಂಜೆ 5.00  ಒಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಗಾಗಿ http://ksteps.karnataka.gov.in ವೆಬ್ ಸೈಟ್ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ ವ್ಯವಸ್ಥಾಪಕ  ನಿರ್ದೇಶಕರು ತಿಳಿಸಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...