ಭಟ್ಕಳ: ಸಿ.ಸಿ.ಎಫ್. ಕಚೇರಿಯಲ್ಲಿ ಅರಣ್ಯ ಅತಿಕ್ರಮಣದಾರರ ಸಭೆ ನಾಳೆ

Source: S O News Service | By SahilOnline Staff | Published on 10th February 2020, 11:05 PM | Coastal News |

ಭಟ್ಕಳ: ಸ್ಥಳೀಯ ಅರಣ್ಯ ಅಧಿಕಾರಿಗಳಿಂದ ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ಮತ್ತು ದೌರ್ಜನ್ಯವಾಗುತ್ತಿರುವ ಕುರಿತು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ, ಶಿರಸಿ ಮುಖ್ಯ ಅರಣ್ಯಾಧಿಕಾರಿ ಸ್ಥಳ ಪರಿಶೀಲನೆ ಜರುಗಿಸಿದ್ದು, ಸಮಸ್ಯೆಗಳ ಕುರಿತು ಸಿ.ಸಿ.ಎಫ್. ಕಚೇರಿಯಲ್ಲಿ ಫೆ.12ರಂದು ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರ ಮತ್ತು ಗ್ರಾಮೀಣ ಭಾಗದ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಂದ ತೊಂದರೆಗೊಳಗಾದ ಸ್ಥಳದÀ ಪರಿಶೀಲನೆ ಜರುಗಿಸಿದ್ದು, ಅಸ್ತಿತ್ವದಲ್ಲಿರುವ ಸಾಗುವಳಿ ಭೂಮಿಯಲ್ಲಿ ಕಟ್ಟಿಕೊಂಡಿರುವ ಮನೆ ರಿಪೇರಿ, ಪುನರ್ ನಿರ್ಮಾಣ ಮತ್ತು ನವೀಕರಣಕ್ಕೆ ಈಗಾಗಲೇ ಸಿಬ್ಬಂದಿಗಳು ಆತಂಕ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ 5-6 ತಿಂಗಳಿನಿಂದ ಈ ಸಂಬಂಧ ಹಲವಾರು ಪ್ರತಿಭಟನೆ, ಸಭೆ, ಸಮಾರಂಭ ಜರುಗಿಸಿದ್ದು ಹೋರಾಟಗಾರರ ವೇದಿಕೆಯು ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ದೂರನ್ನು ನೀಡಿದ ಹಿನ್ನೆಲೆಯಲ್ಲಿ ಸಿ.ಸಿ.ಎಫ್. ಪರವಾನಿಗೆ ಮೇರೆಗೆ ವಿಶೇಷ ಅಧಿಕಾರಿ ರಘು ಅವರು ಅತಿಕ್ರಮಣದಾರರ ಸಾಗುವಳಿಯ ನೈಜತೆಯನ್ನು ಪರಿಶೀಲಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಹೊನ್ನಾವರ ಡಿ.ಎಫ್.ಒ. ಗಣಪತಿ, ಎ.ಸಿ.ಎಫ್. ಸುದರ್ಶನ, ಆರ್.ಎಫ್.ಒ ಸವಿತಾ ದೇವಾಡಿಗ, ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ, ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಮಹಮ್ಮದ್ ಅಲಿ, ಮಾದೇವ ನಾಯ್ಕ, ರಾಮ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Read These Next

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ಸಿದ್ದಾಪುರದಲ್ಲಿ 203.2 ಮಿ.ಮೀ ಮಳೆ 

ಕಾರವಾರ: ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 43.6 ಮಿ.ಮೀ, ಭಟ್ಕಳ 12.0 ಮಿ.ಮೀ, ...

ಪ.ವರ್ಗದ ಫಲಾನುಭವಿಗಳಿಂದ ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ      

ಕಾರವಾರ: ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ವರ್ಗದ ಫಲಾನುಭವಿಗಳು ಗುಡಿ ಮತ್ತು ಅತೀ ಸೂಕ್ಷ್ಮ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಆಸಕ್ತಿ ...