ಕೇರಳದ ಪಿಎಫ್ ಐ ತಲವಾರು ಸಂಗ್ರಹಿಸಿ ಸರಬರಾಜು ಮಾಡುತ್ತಿದೆಯೇ ?

Source: sonews | By Staff Correspondent | Published on 27th July 2018, 6:38 PM | National News | Special Report | Don't Miss |

ತಿರುವನಂತಪುರಂ : ಕೇರಳದಲ್ಲಿ ಸಕ್ರಿಯವಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಭವಿಷ್ಯದಲ್ಲಿ ಭಾರತದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ತಲವಾರುಗಳನ್ನು ಸಂಗ್ರಹಿಸುತ್ತಿದೆ ಎಂಬ ಆರೋಪ ಹೊರಿಸುವಂತಹ ಸಾಮಾಜಿಕ ಜಾಲತಾಣ ಪೋಸ್ಟ್ ಒಂದು ವೈರಲ್ ಆಗಿದೆ.

“ಹಿಂದೂಗಳೇ ನಿದ್ರಿಸುತ್ತಾ ಇರಿ. ಮುಸ್ಲಿಮರು ನಿಮ್ಮ ವಿರುದ್ಧ  ರಕ್ತಪಾತ ನಡೆಸಲು ತಯಾರಿ ನಡೆಸುತ್ತಿದ್ದಾರೆ. ಕೇರಳದಲ್ಲಿ ಪಿಎಫ್‍ಐ ಫ್ಯಾಕ್ಟರಿ ಮೇಲೆ ನಡೆದ ದಾಳಿಯಲ್ಲಿ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ದೇಶದಾದ್ಯಂತ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿರುವ ಮದ್ರಸಾ ಮತ್ತು ಮಸೀದಿಗಳಿಗೆ ಸರಬರಾಜು ಮಾಡಲಾಗುತ್ತಿದೆ,'' ಎಂಬ ಅರ್ಥದಲ್ಲಿ ಈ ವಿವಾದಾಸ್ಪದ ಪೋಸ್ಟ್ ಮಾಡಲಾಗಿದೆ.

‘ಇಂಡಿಯಾ ಟುಡೇ’ಯ ವೈರಲ್ ಟೆಸ್ಟ್ ತಂಡ ಈ ಸಂದೇಶ ಮತ್ತು ಫೋಟೋವನ್ನು ಪರಾಮರ್ಶಿಸಿದ್ದು ಚಿತ್ರದಲ್ಲಿ  ಮುರುಕಲು ಸ್ಥಿತಿಯಲ್ಲಿರುವ ಕೊಠಡಿಯ ಶೆಲ್ಫುಗಳಲ್ಲಿ ಆಯುಧಗಳನ್ನು ಪೇರಿಸಿಟ್ಟಿದ್ದು ಕಾಣಿಸುತ್ತದೆ.

ಇಂತಹ ಯಾವುದೇ  ದಾಳಿ ನಡೆದಿಲ್ಲ ಎಂದು ಕೇರಳ ಪೊಲೀಸರು ಸ್ಪಷ್ಟ ಪಡಿಸಿದ್ಧಾರೆ. ಅತ್ತ ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಬಷೀರ್ ಅವರನ್ನು ಸಂಪರ್ಕಿಸಿದಾಗ, “ಇದು ಮುಸ್ಲಿಂ ಸಂಘಟನೆಯನ್ನು ಕೆಟ್ಟ ದೃಷ್ಟಿಯಲ್ಲಿ ಬಿಂಬಿಸುವ ಯತ್ನ, ಇದು ಸಂಪೂರ್ಣ ಸುಳ್ಳು'' ಎಂದು ಹೇಳುತ್ತಾರೆ. ಮೂಲ ಮಲಯಾಳಂನಲ್ಲಿ ಬಂದ ಪೋಸ್ಟ್ ನ ಸ್ಕ್ರೀನ್ ಶಾಟ್ ಅನ್ನೂ ಅವರು ಶೇರ್ ಮಾಡಿದ್ದಾರೆ. ಅದರಲ್ಲಿ ಹೀಗೆ ಬರೆಯಲಾಗಿದೆ. “ಎಸ್‍ಡಿಪಿಐನ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ, ಎರಡು ಕೊಠಡಿ ತುಂಬಾ ತಲವಾರು ನೋಡಿ ಪೊಲೀಸರಿಗೆ ಆಘಾತವಾಗಿದೆ. ಇನ್ನಷ್ಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗುವುದು,'' ಎಂದು ಅದರಲ್ಲಿ ಬರೆಯಲಾಗಿತ್ತು.

‘ಇಂಡಿಯಾ ಟುಡೆ’ ವೈರಲ್ ಟೆಸ್ಟ್ ತಂಡ ಈ ಬಗ್ಗೆ ಇನ್ನಷ್ಟು ಶೋಧಿಸಿದಾಗ ಆ ಫೋಟೋವನ್ನು ಪಂಜಾಬ್ ರಾಜ್ಯದ ಪಟಿಯಾಲದಲ್ಲಿರುವ ಖಲ್ಸಾ ಕಿರ್ಪನ್ ಎಂಬ ಸಿಖ್ ಕತ್ತಿ ಫ್ಯಾಕ್ಟರಿಯಿಂದ ತೆಗೆಯಲಾಗಿತ್ತೆಂದು ತಿಳಿದು ಬಂದಿದೆ. ಅದರ ಮಾಲಕ ಬಚನ್ ಸಿಂಗ್ ಕೂಡ ಇದನ್ನು ದೃಢಪಡಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಫ್ಯಾಕ್ಟರಿಗೆ ಆಗಮಿಸಿದ್ದ ಪ್ರವಾಸಿಗರ ತಂಡ ಈ  ಫೋಟೋ ತೆಗೆದಿರಬೇಕೆಂದು ಅವರು ಹೇಳುತ್ತಾರೆ.

 

ಕೃಪೆ:vbnewsonline

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...