ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ : ಸೈನಿಕರ ಕಲ್ಯಾಣಕ್ಕೆ ಉದಾರ ನೆರವು ನೀಡಿ - ದೀಪಾ ಚೋಳನ್

Source: so news | Published on 7th December 2019, 11:45 PM | State News | Don't Miss |


ಧಾರವಾಡ: ಸೈನಿಕರು ಮತ್ತು ಅವಲಂಬಿತ ಕುಟುಂಬಗಳ ಕಲ್ಯಾಣಕ್ಕಾಗಿ ಪ್ರತಿವರ್ಷ ಡಿಸೆಂಬರ್ 7 ರಂದು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕರು ಧ್ವಜಗಳನ್ನು ಖರೀದಿಸಿ , ಸೈನಿಕರ ಕಲ್ಯಾಣ ನಿಧಿಗೆ ಉದಾರ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ  ಕಾರ್ಯಕ್ರಮದಲ್ಲಿ ಸಶಸ್ತ್ರ ಪಡೆಗಳ ಧ್ವಜದ ಚಿತ್ರಗಳು ಮತ್ತು  ಸ್ಟಿಕ್ಕರುಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ದೇಶದ ರಕ್ಷಣೆಗಾಗಿ ಜೀವ ಪಣಕ್ಕಿಟ್ಟು ಹೋರಾಡುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ದೇಶದ ಎಲ್ಲಾ ನಾಗರಿಕರು ಕೈಜೋಡಿಸಬೇಕು ಎಂದರು.
ನಿವೃತ್ತ ಏರ್ ಕಮೋಡರ್ ಸಿ.ಎಸ್.ಹವಾಲ್ದಾರ್ ಮಾತನಾಡಿ, ಭಾರತಕ್ಕೆ 1947 ರಲ್ಲಿ ಸ್ವಾತಂತ್ರ್ಯ ದೊರೆತ ಕೂಡಲೇ, ದೇಶದ ರಕ್ಷಣಾ ಪಡೆಗಳ ಸೈನಿಕರ ಕಲ್ಯಾಣಕ್ಕಾಗಿ ಭಾರತದ ಮೊದಲ ರಕ್ಷಣಾ ಸಚಿವ ಬಲದೇವ ಸಿಂಗ್ ನೇತೃತ್ವದಲ್ಲಿ  ಅಂದಿನ ಪ್ರಧಾನ ಮಂತ್ರಿ ಜವಹರಲಾಲ್ ನೆಹರು  ಅವರ ಕಾಳಜಿಯಿಂದಾಗಿ 1949   ಡಿಸೆಂಬರ್ 7 ರಿಂದ  ಈ ಆಚರಣೆ ಜಾರಿಗೊಂಡಿತು ಎಂದರು.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿಂಗ್ ಕಮಾಂಡರ್ ಈಶ್ವರ ಕೊಡೊಳ್ಳಿ, ಎಸ್.ಎಂ.ತುಗಶೆಟ್ಟಿ,ಅರವಿಂದ ಶಿಗ್ಗಾಂವ್, ಬ್ರಿಗೇಡಿಯರ್ ಎಸ್.ಜಿ.ಭಾಗವತ್, ಪಿ.ವಿ.ಹಿರೇಮಠ, ಸಿ.ಯು.ಬೆಳ್ಳಕ್ಕಿ, ಕರಣ್ ದೊಡ್ಡವಾಡ, ಎಂ.ವಿ.ಕರಮರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...