ಡ್ರಗ್ಸ್ ಕೇಸ್-ದೆಹಲಿಯಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಆರೆಸ್ಟ್

Source: SO News | By Laxmi Tanaya | Published on 4th September 2020, 9:38 PM | National News | Don't Miss |

ದೆಹಲಿ : ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ನಗರಕ್ಕೆ ಮಾದಕ ದ್ರವ್ಯಗಳ ಪೂರೈಕೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ದೆಹಲಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಬಂಧಿತನಾದ  ಆರೋಪಿಯನ್ನು ಸಿಸಿಬಿಯ ಇಬ್ಬರು ಅಧಿಕಾರಿಗಳು ದೆಹಲಿಯಿಂದ ಬೆಂಗಳೂರಿಗೆ ಕರೆ ತರಲಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿರೇನ್ ಖನ್ನಾ ಎಂದು ಗುರುತಿಸಲಾಗಿದೆ. ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಖನ್ನಾ  ಬಂಧನದಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆಯೆಂದು ಹೇಳಲಾಗುತ್ತಿದೆ.

ವಿರೇನ್ ಖನ್ನಾ ಬೆಂಗಳೂರು ಮೂಲದವನಾಗಿದ್ದು, ಈತ  ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ  ಸೆಲೆಬ್ರೆಟಿಗಳು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.  ದೆಹಲಿಯ ಮಥೂರ ರಸ್ತೆಯ ನಿವಾಸದಿಂದಲೇ ಈತ ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದು, ಪಾರ್ಟಿಗಳಿಗೆ ಸೆಲೆಬ್ರಿಟಿಗಳಿಗೆ ಮಾತ್ರ ಆಹ್ವಾನ ಇರುತ್ತಿತ್ತು. ಕಮ್ಮನಹಳ್ಳಿಯಲ್ಲಿ ಡ್ರಗ್ ಹಬ್ ಸೃಷ್ಟಿಸಿದ್ದ ಪೆಡ್ಲರ್ ಅನೂಪ್ ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾ ಕುರಿತು ತನಿಖೆ ನಡೆಸುತ್ತಿರುವ ಸಿಬಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ, ರಾಗಿಣಿ ಆಪ್ತರಾದ ರವಿ ಶಂಕರ್ ಅವರನ್ನ ಈಗಾಗಲೇ ಬಂಧಿಸಿದ್ದಾರೆ.

ಮುಂದುವರಿದ ಭಾಗವಾಗಿ  ವಿರೇನ್ ಖನ್ನಾರನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ತನಿಖೆ ಕೈಗೊಳ್ಳುವ ಸಾಧ್ಯತೆ ಇದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...