ಪ. ಬಂಗಾಳ ಚುನಾವಣೆ: ದುರಹಂಕಾರ, ಹಣಬಲ, ಒಡೆದಾಳುವ ನೀತಿ ಸೋತಿದೆ –ಕಪಿಲ್ ಸಿಬಲ್

Source: ಪಿಟಿಐ‌ | Published on 3rd May 2021, 3:01 PM | National News |

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆಲುವು ಸಾಧಿಸಿರುವುದಕ್ಕೆ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅಭಿನಂದಿಸಿದ್ದಾರೆ.

‘ಈ ಚುನಾವಣೆಯಲ್ಲಿ ದುರಹಂಕಾರ, ಹಣದ ಬಲ ಮತ್ತು ಜೈ ಶ್ರೀರಾಮ್‌ ಎಂಬ ಘೋಷಣೆಯನ್ನು ರಾಜಕೀಯಕ್ಕೆ ಬಳಸಿಕೊಂಡವರಿಗೆ ಸೋಲಾಗಿದೆ‘ ಎಂದು ಬಿಜೆಪಿಯ ಹೆಸರು ಉಲ್ಲೇಖಿಸಿದೆ ಸಿಬಲ್ ಟ್ವೀಟ್‌ ಮಾಡಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಯಾರು ಸೋತರು: ದುರಹಂಕಾರ, ಹಣ ಬಲ, ಜೈ ಶ್ರೀರಾಮ್‌ ಘೋಷಣೆಯನ್ನು ರಾಜಕೀಯಕ್ಕಾಗಿ ಬಳಸಿದ್ದು, ಒಡೆದು ಆಳುವ ಕಾರ್ಯಸೂಚಿ ಮತ್ತು ಚುನಾವಣಾ ಆಯೋಗ‘ ಎಂದು ಸಿಬಲ್‌ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಆಕೆ ಅವೆಲ್ಲವನ್ನೂ ಎದುರಿಸಿ ಅವರ ವಿರುದ್ಧ ಜಯಗಳಿಸಿದ್ದಾರೆ‘ ಎಂದು ಮಮತಾ ಗೆಲುವನ್ನು ಶ್ಲಾಘಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...