ಕಲಾತಂಡಗಳು ಅಭಿನಯದ ಮೂಲಕ ಸಾರ್ವಜನಿಕರಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು : ಜಿಲ್ಲಾಧಿಕಾರಿ ದೀಪಾ ಚೋಳನ್

Source: so news | Published on 12th November 2019, 12:17 AM | State News | Don't Miss |


ಧಾರವಾಡ: ಹೆಚ್‌ಐವಿ, ಏಡ್ಸ್ ದಂತಹ ಭಯಾನಕ ರೋಗಗಳ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದ್ದು, ಕಲಾತಂಡಗಳು ತಮ್ಮ ಅಭಿನಯದ ಮೂಲಕ ಗ್ರಾಮೀಣ ಜನರು ಸೇರಿದಂತೆ ಎಲ್ಲಾ ಸಾರ್ವಜನಿಕರಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಅವರು ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ವಯಂಸೇವಾ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಜಾನಪದ ಕಲಾ ತಂಡಗಳಿಗೆ ಆಯೋಜಿಸಿದ್ದ ಆರೋಗ್ಯ ಸಂಬAಧಿತ ಮಾಹಿತಿ ಹಾಗೂ ಏಡ್ಸ್ ಕುರಿತು ಸಾರ್ವಜಿನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳಿಗಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.

ಕಲಾವಿದರು ಬೀದಿನಾಟಕ, ಕಿರುನಾಟಕ ಮತ್ತು ಜಾನಪದ ಗೀತೆಗಳ ಮೂಲಕ ಏಡ್ಸ್, ಕ್ಯಾನ್ಸರ್ ದಂತಹ ರೋಗಗಳಿಗೆ ಹಾಗೂ ಇನ್ನೀತರ ರೋಗಗಳಿಗೆ ಸರ್ಕಾರ ನೀಡುವ ಉಚಿತ ಚಿಕಿತ್ಸ್ಸೆ, ಉಚಿತ ಔಷಧಿ ಮತ್ತು ಸೇವೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿ, ಅವರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾಗರಿಕರ ಆರೋಗ್ಯ ರಕ್ಷಣೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶೇಷವಾಗಿ ಬಡವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲವಾಗಲು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚು ಮಾಹಿತಿ ನೀಡಿ ಈ ಸೌಲಭ್ಯವನ್ನು ಪ್ರತಿಯೊಬ್ಬರು ಪಡೆಯುವಂತೆ ಮಾಡಬೇಕು. ಕಲಾತಂಡಗಳು ಆರೋಗ್ಯ ಇಲಾಖೆಯಿಂದ ನೀಡುವ ಸೌಲಭ್ಯಗಳ ಕುರಿತು ಸವಿವರವಾದ ಮಾಹಿತಿಯನ್ನು ತಮ್ಮ ಕಲೆಗಳ ಮೂಲಕ ಸಾರ್ವಜನಿಕರಿಗೆ ನೀಡಿದರೆ ಸರ್ಕಾರದ ಉದ್ದೇಶ ಸಫಲವಾಗುತ್ತದೆ ಎಂದು ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್.ಚಿನ್ನಣ್ಣವರ ಮಾತನಾಡಿ, ಗ್ರಾಮೀಣ ಹಾಗೂ ಅನಕ್ಷರಸ್ಥ ಜನರಿಗೆ ಅವರ ಭಾಷೆಯಲ್ಲಿ ಕಲಾವಿದರು ಜಾನಪದ ಕಲೆಯ ಮೂಲಕ ಜಾಗೃತಿ ಮೂಡಿಸಬೇಕು. ಮತ್ತು ಜನರಿಗೆ ಮನಮುಟ್ಟುವಂತೆ ಕಲೆಯ ಮೂಲಕ ಮಾಹಿತಿ ನೀಡಿ ರೋಗಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಂಶವAತ ಮದೀನಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆಯ ಜಂಟಿ ನಿರ್ದೇಶಕ ಸಂಜಯ್ ಪಾಟೀಲ, ರಾಜ್ಯ ನೋಡೆಲ್ ಅಧಿಕಾರಿ ಡಾ. ಗೀತಾ ಬಾಲಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಕುಮಾರ ಮಾನಕರ್, ಆರ್‌ಸಿಎಚ್ ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಕೆ.ಎನ್. ತನುಜಾ, ಗೋವಿಂದರಾಜ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಶಂಕರ ಪಾಟೀಲ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ನಂಜೇಗೌಡ ವಂದಿಸಿದರು. ಕಾರ್ಯಕ್ರಮದಲ್ಲಿ ಕಲಾವಿದರು ಆರೋಗ್ಯ ಜಾಗೃತಿ ಕುರಿತು ನೃತ್ಯ ಪ್ರದರ್ಶನ ಮಾಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...