ರಾಜಸ್ಥಾನಕ್ಕೆ ಗೆಹಲೋಟ್, ಮಧ್ಯಪ್ರದೇಶಕ್ಕೆ ಕಮಲನಾಥ್ ಸಿಎಂ

Source: sonews | By Staff Correspondent | Published on 13th December 2018, 4:49 PM | National News | Don't Miss |

ಹೊಸದಿಲ್ಲಿ: ವಿಧಾನಸಭಾ ಚುನಾವಣೆಯ ವಿಜಯದ ನಂತರ ರಾಜಸ್ಥಾನದ ಮುಖ್ಯಮಂತ್ರಿಯಾಗಿ 3ನೆ ಬಾರಿಗೆ ಅಶೋಕ್ ಗೆಹ್ಲೋಟ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಇಂದು ದಿಲ್ಲಿಯಲ್ಲಿ ಅಶೋಕ್ ಗೆಹ್ಲೋಟ್ ಹಾಗು ಸಚಿನ್ ಪೈಲಟ್ ರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿದ್ದರು.

2013ರಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದ ನಂತರ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಈ ಬಾರಿಯ ಚುನಾವಣಾ ಪ್ರಚಾರಕ್ಕಾಗಿ ಅವರು 5 ಲಕ್ಷ ಕಿ.ಮೀ. ಪ್ರವಾಸ ಕೈಗೊಂಡಿದ್ದರು. ಸಿಎಂ ಹುದ್ದೆಗೆ ಈ ಇಬ್ಬರ ನಡುವೆ ತೀವ್ರ ಪೈಪೋಟಿ ಇತ್ತಾದರೂ ಅಶೋಕ್ ಗೆಹ್ಲೋಟ್ ರನ್ನು ರಾಹುಲ್ ಗಾಂಧಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ರಾಜ್ಯದಲ್ಲಿ ಸಿಎಂ ರೇಸ್ ನಲ್ಲಿರುವ ಮತ್ತೋರ್ವ ಆಕಾಂಕ್ಷಿ ಜ್ಯೋತಿರಾದಿತ್ಯ ಸಿಂಧಿಯಾ.

ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸಿಂಧಿಯಾ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದ್ದು, ಇಲ್ಲೂ ಕೂಡ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...