ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ, ಗೆಹ್ಲೋಟ್ ಹೊರಕ್ಕೆ: ಖರ್ಗೆ, ವೇಣು, ದಿಗ್ವಿಜಯ್ ಸ್ಪರ್ಧೆ?

Source: Vb | By I.G. Bhatkali | Published on 27th September 2022, 7:30 AM | National News |

ಹೊಸದಿಲ್ಲಿ: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಹಾಗೂ ಕಾಂಗ್ರೆಸ್‌ನ ಒಳ ಜಗಳ ತಾರಕಕ್ಕೇರಿರುವ ನಡುವೆ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಅಶೋಕ್ ಗೆಹ್ಲೋಟ್ ಅವರು ಹೊರಗುಳಿದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಉನ್ನತ ನಾಯಕ ಸ್ಥಾನದ ಸ್ಪರ್ಧೆಯಲ್ಲಿ ಪ್ರಸಕ್ತ ಹಿರಿಯ ನಾಯಕರಾದ ಕೆ.ಸಿ. ವೇಣುಗೋಪಾಲ್, ದಿಗ್ವಿಜಯ್ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇದ್ದಾರೆ.

“ಅವರು (ಅಶೋಕ್ ಗೆಹ್ಲೋಟ್) ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30ರ ಮುನ್ನ ಇತರ ನಾಯಕರು ನಾಮಪತ್ರ ಸಲ್ಲಿ ಸಿದ್ದಾರೆ ಮುಕಲ್ ವಾಸ್ಟಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಕೆ.ಸಿ. ವೇಣುಗೋಪಾಲ್ ಸ್ಪರ್ಧೆಯಲ್ಲಿ ಇದ್ದಾರೆ'' ಎಂದು ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದ್ದಾರೆ.

“ಗೆಹ್ಲೋಟ್ ಅವರ ನಡೆ ಪಕ್ಷದ ನಾಯಕತ್ವಕ್ಕೆ ಪಥ್ಯವಾಗಿಲ್ಲ. ಅವರ ಬಗ್ಗೆ ಪಕ್ಷ ಅಸಮಾಧಾನಗೊಂಡಿದೆ' ಎಂದು ಕಾಂಗ್ರೆಸ್‌ ಕಾರ್ಯಕಾರಿಣಿ ಸದಸ್ಯರಾಗಿರುವ ಇನ್ನೋರ್ವ ನಾಯಕರು ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...