ಗುಂಡಿಕ್ಕಿ ಮೂವರು ಉಗ್ರರ ಹತ್ಯೆ ದಾಳಿಯಲ್ಲಿ ಎಎಸ್‌ಐ ಹುತಾತ್ಮ

Source: ANI | Published on 30th August 2020, 8:21 PM | National News | Don't Miss |


ಶ್ರೀನಗರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ಪ್ರತಿ ದಾಳಿಯಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಈ ಘಟನೆ ಶ್ರೀನಗರದ ಪಂತಾಚೌಕ್‌ನಲ್ಲಿ ತಡ ರಾತ್ರಿ ಸಂಭವಿಸಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಸಿಆರ್‌ಪಿಎಫ್ ಯೋಧರು ಚೆಕ್ ಪಾಯಿಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಭಯೋತ್ಪಾದಕರು ಸಿಆರ್‌ಪಿಎಫ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಇಡೀ ಪ್ರದೇಶವನ್ನು ಸುತ್ತುವರೆದು ಶೋಧನಾ ಕಾರ್ಯ ಆರಂಭಿಸಿತು. ಈ ವೇಳೆ ಭಯೋತ್ಪಾದಕರು ಸೇನಾ ಪಡೆಯತ್ತ ಗುಂಡು ಹಾರಿಸಿದ್ದಾರೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ,
ಉಗ್ರರು ನಡೆಸಿದ ದಾಳಿಯಲ್ಲಿ ಎಎಸ್‌ಐ ಹುತಾತ್ಮರಾಗಿದ್ದಾg. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...