ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ - ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ

Source: SO News | By Laxmi Tanaya | Published on 4th December 2021, 9:56 PM | State News | Don't Miss |

ಶಿವಮೊಗ್ಗ  : ಡಿಸೆಂಬರ್ 10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು ಚುನಾವಣಾ ಆಯೋಗವು ಹೊರಡಿಸಿರುವ ಮಾರ್ಗಸೂಚಿಗಳನ್ವಯ, ಯಾವುದೇ ಆಕ್ಷೇಪಣೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ ಅವರು ಸೂಚಿಸಿದರು.                     

ಅವರು ಶನಿವಾರ ಜಿಲ್ಲಾ ಚುನಾವಣಾ ಶಾಖೆಯು ವಿಧಾನಪರಿಷತ್ ಚುನಾವಣೆಗೆ ನಿಯೋಜಿತ ಅಧಿಕಾರಿ - ಸಿಬ್ಬಂದಿ ಗಳಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ಈ ಹಿಂದಿನ ಅನೇಕ ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ್ದರೂ ಪ್ರತಿ ಬಾರಿಯ ಚುನಾವಣಾ ಕರ್ತವ್ಯ ಹೊಸ ಅರಿವು, ಅನುಭವ ಮೂಡಿಸುತ್ತದೆ. ಆದ್ದರಿಂದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ವಿಷಯ ವಿನಿಮಯ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.                   

ಕರ್ತವ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಿ, ಅತ್ಯಂತ ಪಾರದರ್ಶಕವಾಗಿ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಚುನಾವಣಾ ಆಯೋಗದ ಇತ್ತೀಚಿನ ಆಡಳಿತಾತ್ಮಕ ಸುಧಾರಣ ಕ್ರಮಗಳಿಂದಾಗಿ ಚುನಾವಣಾ ಕಾರ್ಯ ಸರಳ, ಸುಲಭವೂ ಆಗಿದೆ ಎಂದರು.

ಪ್ರಸ್ತುತ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ 07 ತಾಲೂಕುಗಳು ಹಾಗೂ ದಾವಣಗೆರೆ ಜಿಲ್ಲೆಯ 03 ತಾಲೂಕುಗಳ ಸೇರಿದಂತೆ ಒಟ್ಟು 10 ತಾಲೂಕುಗಳ ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಆಡಳಿತ ಕೇಂದ್ರಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿ, ಚುನಾವಣೆ ನಡೆಸಲಾಗುವುದು. ಈ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಿರುವ ಪ್ರತಿನಿಧಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿದ್ದರೂ, ಚುನಾವಣಾ ಅವಧಿ ಪೂರ್ಣಗೊಳ್ಳುವವರೆಗೆ ನಿಯೋಜಿತ ಸಿಬ್ಬಂಧಿಗಳೆಲ್ಲರೂ ಮತಗಟ್ಟೆಯಲ್ಲಿದ್ದು, ಪ್ರಾಮಾಣಿಕವಾಗಿದ್ದು, ಯಾವುದೇ ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಬೇಕು ಮಾತ್ರವಲ್ಲ ಉತ್ತಮ ನಡುವಳಿಕೆ ಪ್ರದರ್ಶಿಸಬೇಕು.       

ಪ್ರತಿ ಮತಗಟ್ಟೆಯೂ ವಿಡಿಯೋ ಕಣ್ಗಾವಲಿಗೆ ಒಳಪಟ್ಟಿರುತ್ತದೆ ಎಂಬುದನ್ನು ತಿಳಿದಿರಬೇಕೆಂದರು. ಅಂತಿಮವಾಗಿ 4ಜನ ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವ ಈ ಚುನಾವಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಬದಲಾಗಿ ಹಳೆಯ ಪದ್ದತಿಯಂತೆ ಮತಗಟ್ಟೆಗಳನ್ನು ಬಳಸಲಾಗುತ್ತಿದೆ ಎಂದ ಅವರು, ಅತ್ಯಂತ ಕಡಿಮೆ ಪ್ರಮಾಣದ ಮತದಾರರಿದ್ದು, ಅತ್ಯಲ್ಪ ಅವಧಿಯಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆ.ಹೆಚ್.ಶಿವಕುಮಾರ್ ಅವರು ಚುನಾವಣಾ ಪ್ರಕ್ರಿಯೆ ಹಾಗೂ ವಿಧಾನಗಳ ಬಗ್ಗೆ ನಿಯೋಜಿತ ಅಧಿಕಾರಿಗಳಿಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಅವರು ಉಪಸ್ಥಿತರಿದ್ದರು.

Read These Next

ಕೋವಿಡ್-19ರ ಸೋಂಕಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ: ಸಚಿವ ಕೆ.ಸುಧಾಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕೋವಿಡ್-19ರ ಮೂರನೇ ಅಲೆಯಲ್ಲಿ ಸೋಂಕಿನ ಗುಣಲಕ್ಷಣಗಳು ಸೌಮ್ಯವಾಗಿದ್ದು, ತೀವ್ರತೆಯಿರದಿದ್ದರೂ ಸಹ ...

ಶಾಸಕ ಸೋಮಶೇಖರರೆಡ್ಡಿ ಮತ್ತು ಅಧಿಕಾರಿಗಳು ಸಾಥ್. ಬಳ್ಳಾರಿ ನಗರ ಪ್ರದಕ್ಷಿಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ : ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಬಳ್ಳಾರಿ ನಗರ ...

ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಠಿಕತೆ ಜಾಗೃತಿ ಅಗತ್ಯ: ಡಿಹೆಚ್‍ಓ ಡಾ. ಬಿ.ಸಿ. ಕರಿಗೌಡರ

ಧಾರವಾಡ : ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಠಿಕತೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಬಾಲಕಿಯರಿಗೆ ಸುರಕ್ಷತೆ ...

ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ...