ಕುಮಟಾ ರಾ.ಹೆ.೬೬ರಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ಸಾವು

Source: sonews | By Staff Correspondent | Published on 7th July 2018, 6:36 PM | Coastal News | State News | Incidents | Don't Miss |

ಕುಮಟಾ:ಉ.ಕ.ಜಿಲ್ಲೆಯ ಕುಮಟಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಇಬ್ಬರು ಸಾವನ್ನಪ್ಪಿದ್ದು ಗಾಯಾಳುಗಳ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ. ಘಟನೆಯಲ್ಲಿ ಎಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅವರ ನಿಖರವಾದ ಮಾಹಿತಿ ಕಲೆಹಾಕಲಾಗುತ್ತಿದೆ.  

ಮೃತ ಪಟ್ಟವರಲ್ಲಿ ಶಶಿಕಲಾ ಈಶ್ವರ ಹರಿಕಂತ್ರ ಹೊಸಕಟ್ಟಾ ಗೋಕರ್ಣ ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ. 

ಕಬ್ಬಿಣದ ಬೃಹತ್ ಕಂಬವೊಂದನ್ನು ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಒಂದು ಭಾಗದಲ್ಲಿ ಕುಳಿತಿದ್ದವರಿಗೆ ಲಾರಿಯಲ್ಲಿದ್ದ ಕಬ್ಬಿಣದ ಕಂಬ ಬಡಿಡು ಗಂಭೀರ ಗಾಯಗೊಂಡರು ಎಂದು ಮಾಹಿತಿ ದೊರಕಿದೆ.

ಪೊಲೀಸರು, ಸ್ಥಳೀಯರ ಸಹಾಯದಿಂದ ಮೃತದೇಹ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕುಮಟಾ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿಯವರು ಸರಕಾರಿ ಆಸ್ಪತ್ರೆಗೆ ತಕ್ಷಣ ಹಾಜರಾಗಿ ಸೂಕ್ತ ಕ್ರಮಕ್ಕೆ ವ್ಯವಸ್ಥೆ ಮಾಡುತ್ತಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...