ಭಟ್ಕಳ: ಐರಾವತ ಬಸ್ ಮತ್ತು ಪ್ಯಾಸೆಂಜರ್ ಟೆಂಪೋ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

Source: so news | By MV Bhatkal | Published on 1st October 2022, 12:49 PM | Coastal News | Don't Miss |

ಭಟ್ಕಳ: ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡಿಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ.

ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಗಳು ದಾಖಲು ಮಾಡಲಾಗಿದೆ. ಬಸ್ ಮತ್ತು ಟೆಂಪೋ ನಲ್ಲಿ 75ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಎಡಬಾಗಕ್ಕೆ  ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ. 

ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಗಾಯಗೊಂಡ ಹೆಚ್ಚಿನವರು ಶಿಕ್ಷಕರು ಆಗಿದ್ದು ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮತ್ತಿತರ ಪದಾಧಿಕಾರಿಗಳಿಂದ ಗಾಯಾಳು ಶಿಕ್ಷಕರ ಚಿಕಿತ್ಸೆಗೆ ನೆರವು ನೀಡಿದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...