ವೈದ್ಯಾಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ; ನೌಕರರ ಸಂಘದ ಖಂಡನೆ

Source: so news | By MV Bhatkal | Published on 28th March 2023, 7:10 PM | Coastal News | Don't Miss |

ಭಟ್ಕಳ:ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಅಪರಿಚಿತ ಯುವಕನೋರ್ವ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ. ಇದರಿಂದಾಗಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಭಯದ ವಾತಾವರಣ ನಿರ್ಮಾಣವಾಗಿದ್ದು, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಭಾನುವಾರ ತಾಲೂಕಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳ ಮೇಲೆ ಹಾಗೂ ಶುಶೂಷಾಧಿಕಾರಿಗಳಿಗೆ ಯುವಕನೊಬ್ಬ ಬೆದರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ಈ ಕುರಿತು ಕರ್ತವ್ಯದಲ್ಲಿದ್ದ ಆಡಳಿತ ವೈದ್ಯಾಧಿಕಾರಿ
ಅವರು ತುರ್ತು ಚಿಕಿತ್ಸಾ ವಿಭಾಗಕ್ಕೆ ಧಾವಿಸಿ ಬಂದು ಅಪರಿಚಿತನನ್ನು ಈ ಕುರಿತು ಪ್ರಶ್ನಿಸಿ ವಿಚಾರಿಸಿದಾಗ ಒಮ್ಮೆಲೆ ಅವರನ್ನು ನಿಂದಿಸಿ ಹಲ್ಲೆ ಮಾಡಲು ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಘಟನೆಯು ಆಸ್ಪತ್ರೆಯಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದ್ದು, ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತೊಂದರೆ- ಯಾಗದಂತೆ ಸುಗಮವಾಗಿ ಕರ್ತವ್ಯ ನಿರ್ವಹಿಸಲು ತುಂಬಾ ಕಷ್ಟಕರವಾದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮೋಹನ ನಾಯ್ಕ, ಪ್ರಕಾಶ ಶಿರಾಲಿ, ಗಣೇಶ ಹೆಗಡೆ, ಸಂಶುದ್ದೀನ್ ಸೇರಿದಂತೆ ಉಳಿದ ಸರಕಾರಿ ಇಲಾಖೆಯ ನೌಕರರು ಹಾಗೂ ತಾಲೂಕಾಸ್ಪತ್ರೆಯ ನೌಕರರು ಸಿಬ್ಬಂದಿಗಳು ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...