ಗಮನ ಸೆಳೆದ ಮತದಾರರ ಜಾಗೃತಿ ಜಾಥಾ

Source: so news | By MV Bhatkal | Published on 30th March 2019, 12:47 AM | State News | Don't Miss |

 

ಹಾಸನ:ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಮತದಾರರ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಕುರಿತು ಬೃಹತ್ ಆಟೋ ಜಾಥಾ ನಡೆಯಿತು.
ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ಜಾಥಾಕ್ಕೆ ಚಾಲನೆ ನೀಡಿದರು. ಚುನಾವಣಾ ವೀಕ್ಷಕರಾದ ಶಶಿಭೂಷಣ್ ಕುಮಾರ್, ಮಂಜಿತ್ ಸಿಂಗ್ ಬ್ರಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಎ.ಎನ್.ಪ್ರಕಾಶ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಎನ್.ವಿಜಯ್ ಪ್ರಕಾಶ್, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪ್ರಿಯಾಂಗ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಉಪವಿಭಾಗಾಧಿಕಾರಿಗಳಾದ ಡಾ|| ಹೆಚ್.ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ವಿನೋದ್ ಚಂದ್ರ, ಸಹಾಯಕ ಚುನಾವಣಾಧಿಕಾರಿಗಳಾದ ಗಿರೀಶ್ ನಂದನ್, ಶ್ರೀನಿವಾಸ್‍ಗೌಡ, ತಹಸೀಲ್ದಾರ್ ಶ್ರೀನಿವಾಸಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆಶೋಕ್ ಕುಮಾರ್, ಸಮಾಜ ಸೇವಕರಾದ ಪಾಷ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಆಟೋ ರಿಕ್ಷಾ ಮೆರವಣಿಗೆ ವಿಶೇಷ: ಮತದಾರರ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಕುರಿತು ನಡೆದ ಬೃಹತ್ ಆಟೋ ಜಾಥಾ ಮೆರವಣಿಗೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಆಟೋಗಳು ಸರದಿ ಸಾಲಿನಲ್ಲಿ ಸಾಗಿ ಎನ್.ಆರ್.ವೃತ್ತದಲ್ಲಿ ವಿಶೇಷ ವಿನ್ಯಾಸ ನಿರ್ಮಿಸಿದವು.
ಮತದಾನ ಜಾಗೃತಿ ಎಂಬ ಬರಹದೊಂದಿಗೆ ಸಿದ್ದಪಡಿಸಿರುವ ಖಾಕಿ ಸಮವಸ್ತ್ರ ಹಾಗೂ ಟೋಪಿಯನ್ನು ಧರಿಸಿದ ಆಟೋ ಚಾಲಕರು ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟ ಮೆರವಣಿಗೆಯಲ್ಲಿ ಮಹಿಳಾ ಅರಸೇನಾ ಪಡೆ ಹಾಗೂ ಕೆ.ಎಸ್.ಆರ್.ಟಿ.ಸಿ ತರಬೇತಿ ಕೇಂದ್ರದ ತರಬೇತಿದಾರರು ಪಾಲ್ಗೊಂಡು ಗಮನ ಸೆಳೆದರು.
ಡೊಳ್ಳು ಕುಣಿತ ಕಲಾವಿದರು ಮೆರವಣಿಗೆ ವೇಳೆಯಲ್ಲಿ ಮೆರಗು ನೀಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...