ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

Source: VB | By I.G. Bhatkali | Published on 15th November 2021, 1:39 PM | Sports News |

ದುಬೈ: ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ಬೌಂಡರಿ, 3 ಸಿಕ್ಸರ್) ಅರ್ಧಶತಕಗಳ ಕೊಡುಗೆಯ ನೆರವಿನಿಂದ ನ್ಯೂಝಿಲ್ಯಾಂಡ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿರುವ ಆಸ್ಟ್ರೇಲಿಯ ಮೊದಲ ಬಾರಿ ಟ್ವೆಂಟಿ-20 ವಿಶ್ವಕಪನ್ನು ಮುಡಿಗೇರಿಸಿ ಕೊಂಡಿದೆ.

ರವಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗೆಲ್ಲಲು 173 ರನ್ ಗುರಿ ಪಡೆದಿದ್ದ ಆಸ್ಟ್ರೇಲಿಯವು 18.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ತನ ದೀರ್ಘಕಾಲದ ಟಿ-20 ವಿಶ್ವಕಪ್ ಗೆಲ್ಲುವ ಕನಸನ್ನು ಈಡೇರಿಸಿಕೊಂಡಿತು.

ಆಸ್ಟ್ರೇಲಿಯವು 2.3ನೇ ಓಮ್ನಲ್ಲಿ ನಾಯಕ ಆರೊನ್ ಫಿಂಚ್ (5)ವಿಕೆಟನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆಗ ಜೊತೆಯಾದ ವಾರ್ನರ್ ಹಾಗೂ ಮಾರ್ಷ್ 2ನೇ ವಿಕೆಟ್‌ಗೆ 92 ರನ್ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ವಾರ್ನರ್ ಅವರು ಬೌಲ್‌ಗೆ ಕ್ಲೀನ್‌ಬೌಲ್ದಾದ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್ (ಔಟಾಗದೆ 28, 18 ಎಸೆತ, 4 ಬೌಂಡರಿ, 1 ಸಿಕ್ಸರ್) ಅವರೊಂದಿಗೆ ಕೈಜೋಡಿಸಿದ ಮಾರ್ಷ್ 3ನೇ ವಿಕೆಟಿಗೆ ಮುರಿಯದ ಜೊತೆಯಾಟದಲ್ಲಿ 66 ರನ್ ಸೇರಿಸಿ ತಂಡಕ್ಕೆ ಇನ್ನೂ 7 ಎಸೆತಗಳು ಬಾಕಿ ಇರುವಾಗಲೇ ಗೆಲುವು ತಂದುಕೊಟ್ಟರು.

ಟಾಸ್ ಮತ್ತೊಮ್ಮೆ ನಿರ್ಣಾಯಕ ಪಾತ್ರವಹಿಸಿದ್ದು, ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ   ಟಾಸ್ ಗೆದ್ದ ತಂಡ ಬಾಸ್ ಎನ್ನುವ ಮಾತು ನಿಜವಾಯಿತು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಹನ್ (85 ರನ್, 48 ಎಸೆತ, 10 ಬೌಂಡರಿ, 3 ಸಿಕ್ಸರ್‌) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ನ ಷ್ಟಕ್ಕೆ 172 ರನ್ ಗಳಿಸಿತು.

ಇನಿಂಗ್ಸ್ ಆರಂಭಿಸಿದ ಮಾರ್ಟಿನ್ ಗಪ್ಟಿಲ್ (28) ಹಾಗೂ ಮಿಚೆಲ್(11)ಮೊದಲ ವಿಕೆಟ್‌ಗೆ 28 ರನ್ ಗಳಿಸಿದರು. ಗಲ್‌ರೊಂದಿಗೆ 2ನೇ ವಿಕೆಟ್‌ಗೆ 48 ರನ್ ಜೊತೆಯಾಟ ನಡೆಸಿದ ವಿಲಿಯಮನ್ ಆ ನಂತರ ಫಿಲಿಪ್ಸ್ ಜೊತೆಗೆ 3ನೇ ವಿಕೆಟ್‌ನಲ್ಲಿ 68 ರನ್ ಸೇರಿಸಿ ತಂಡದ ಮೊತ್ತ ಹಿಗ್ಗಿಸಿದರು.

ಆಸ್ಟ್ರೇಲಿಯ ಬೌಲಿಂಗ್ ವಿಭಾಗದಲ್ಲಿ ಜೋಶ್ ಹೇರಲ್‌ವುಡ್ (3-16)ಯಶಸ್ವಿ ಬೌಲರ್ ಎನಿಸಿಕೊಂಡರು. ಸ್ಪಿನ್ನರ್ ಆ್ಯಡಮ್ ಝಾಂಪ(1-26) ಒಂದು ವಿಕೆಟ್ ಪಡೆದರು. ನೀಶಮ್ ಔಟಾಗದೆ 13 ರನ್ ಗಳಿಸಿದರು. ವಿಲಿಯಮನ್ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಎರಡನೇ ನಾಯಕ ಎನಿಸಿಕೊಂಡರು. ಶ್ರೀಲಂಕಾದ ಕುಮಾರ ಸಂಗಕ್ಕರ 2009ರಲ್ಲಿ ಪಾಕಿಸ್ತಾನದ ವಿರುದ್ಧ ಔಟಾಗದೆ 64 ರನ್ ಗಳಿಸಿದ್ದರು.

ವಿಲಿಯಮನ್ 16ನೇ ಓವರ್‌ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ನಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಒಟ್ಟು 22 ರನ್ ಗಳಿಸಿದರು. ಸ್ಟಾರ್ಕ್ ವಿಶ್ವಕಪ್ ಫೈನಲ್‌ನಲ್ಲಿ ಒಂದೇ ಓವರ್‌ನಲ್ಲಿ ಗರಿಷ್ಠ ರನ್ ಬಿಟ್ಟುಕೊಟ್ಟರು. 4 ಓವರ್‌ಗಳಲ್ಲಿ ಒಟ್ಟು 60 ರನ್ ಬಿಟ್ಟುಕೊಟ್ಟಿರುವ ಸ್ಟಾರ್ಕ್ ವಿಶ್ವಕಪ್ ಫೈನಲ್ ನಲ್ಲಿ ಅತ್ಯಂತ ದುಬಾರಿ ಬೌಲರ್ ಎನಿಸಿಕೊಂಡರು. ಶ್ರೀಲಂಕಾದ ಲಸಿತ್ ಮಾಲಿಂಗ 2012ರಲ್ಲಿ 3 ಕೊಲಂಬೊದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ4 ಓವರ್ ಗಳಲ್ಲಿ 54 ರನ್ ಸೋರಿಕೆ ಮಾಡಿದ್ದರು. ವಿಲಿಯಮನ್ 18ನೇ ಓವರ್‌ನಲ್ಲಿ ಹೇಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 10 ಓವರ್‌ಗಳ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ನ್ಯೂಝಿಲ್ಯಾಂಡ್ ಉಳಿದ 10 ಓವರ್‌ಗಳಲ್ಲಿ 115 ರನ್ ಗಳಿಸಿ 4 ವಿಕೆಟ್‌ನಷ್ಟಕ್ಕೆ ಒಟ್ಟು 172 ರನ್ ಗಳಿಸುವಲ್ಲಿ ಯಶಸ್ವಿಯಾಗಿದೆ.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್