ಕಾಸರಗೋಡು: ಭೀಕರ ರಸ್ತೆ ಅಪಘಾತ; ಮೂವರು ಸಹೋದರಿಯರ ಸಹಿತ ಐವರ ಮೃತ್ಯು

Source: S O News | By I.G. Bhatkali | Published on 27th September 2023, 12:13 AM | Coastal News | National News |

ಕಾಸರಗೋಡು: ಶಾಲಾ ಬಸ್ ಮತ್ತು ಆಟೊ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಸೋಮವಾರ ಸಂಜೆ ಚೆರ್ಕಳ- ಅಡ್ಡಸ್ಥಳ ರಾಜ್ಯ ಹೆದ್ದಾರಿಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

ಮೊಗ್ರಾಲ್ ಪುತ್ತೂರು ನಿವಾಸಿ ಆಟೊ ಚಾಲಕ ಯು.ಎಚ್.ಅಬ್ದುಲ್‌ ರವೂಫ್ (48), ಮೊಗ್ರಾಲ್ ಪುತ್ತೂರಿನ ಮೊಗರು ನಿವಾಸಿಗಳಾದ ಉಸ್ಮಾನ್ ಎಂಬವರ ಪತ್ನಿ ಬೀಫಾತಿಮ(50), ಇಸ್ಮಾಯಿಲ್ ಎಂಬವರ ಪತ್ನಿ ಉಮ್ಮಲಿಮಾ(50), ಬೆಳ್ಳೂರು ನಿವಾಸಿ ಅಬ್ಬಾಸ್ ಎಂಬವರ ಪತ್ನಿ ನಬೀಸಾ(49) ಹಾಗೂ ಶೇಕ್ ಅಲಿ ಎಂಬವರ ಪತ್ನಿ ಬೀಫಾತಿಮ(60) ಮೃತಪಟ್ಟವರು.

ಮೃತರ ಪೈಕಿ ಮೂವರು ಸಹೋದರಿಯರಾಗಿದ್ದರೆ, ಶೇಕ್ ಅಲಿಯ ಪತ್ನಿ ಬೀಫಾತಿಮ ಮೃತರ ಸಂಬಂಧಿಕರಾಗಿದ್ದಾರೆ. ಎ೦ದು ತಿಳಿದುಬ೦ದಿದೆ. ಅಪಘಾತದ ತೀವ್ರತೆಗೆ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ರವೂಫ್ ಕಾಸರಗೋಡಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಸೋಮವಾರ ಸಂಜೆ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪೆರ್ಲ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಬಿಟ್ಟು ಮರಳುತ್ತಿದ್ದ ಶಾಲಾ ಬಸ್‌ ಮುಖಾಮುಖಿ ಢಿಕ್ಕಿಯಾಗಿವೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಬದಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...