ಮಧುಮೇಹ, ರಕ್ತದೊತ್ತಡ ಉಚಿತ ತಪಾಸಣಾ ಮತ್ತು ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮ

Source: sonews | By Staff Correspondent | Published on 10th July 2019, 11:26 PM | State News |

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಮತ್ತು ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ಸಂಯಕ್ತಾಶ್ರಯದಲ್ಲಿ ಮಧುಮೇಹ, ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಮತ್ತು ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರತಿಯೊಬ್ಬರು ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಡೆ ಗಮನಹರಿಸಬೇಕು. ಆಗ್ಗಿಂದಾಗೆ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆಯನ್ನು ಪಾಲಿಸಿ ಆರೋಗ್ಯವಂತರಾಗಿರಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀನಿವಾಸಪುರ ತಾಲೂಕು ವೈದ್ಯಾಧಿಕಾರಿ ಡಾ.ವಿಜಯಮ್ಮ, ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ ರವರು ಮಧುಮೇಹ ರಕ್ತದೊತ್ತಡ ಮತ್ತು ಆರೋಗ್ಯ ಕುರಿತು ಜಾಗೃತಿಯನ್ನು ಮೂಡಿಸಿ ಸಲಹೆಗಳನ್ನು ನೀಡಿದರು.

ವೈದ್ಯಾಧಿಕಾರಿ ಡಾ.ಅಬ್ದುಲ್ ಕಲಾಂ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಆರೋಗ್ಯಾಧಿಕಾರಿ ಆಂಜಿಲಮ್ಮ, ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಶಿಲ್ಪ ಶ್ರೀನಿವಾಸ್, ಶ್ಯಾಮಲಮ್ಮ, ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು, ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯತು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. 

ಲಿಖಿತ ಮತ್ತು ತಂಡ ಪ್ರಾರ್ಥಿಸಿ, ಪ್ರಶಿಕ್ಷಣಾರ್ಥಿ ಲಕ್ಷ್ಮೀದೇವಮ್ಮ ಸ್ವಾಗತಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...